ಕಲಬುರಗಿ: ‘ಅಫಜಲಪುರ ತಾಲ್ಲೂಕಿನ ಅವರಳ್ಳಿಯ ಸಂಗೀತ ರಸಋಷಿ ಪಂಡಿತ ಪುಟ್ಟರಾಜ ಗವಾಯಿ ಸಮಗ್ರ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೇ 26ರಂದು ಬೆಳಿಗ್ಗೆ 9ಕ್ಕೆ ನಗರದ ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಪಂಚಾಕ್ಷರಿ ಗವಾಯಿಗಳ 81ನೇ ಪುಣ್ಯಸ್ಮರಣೆ, ಪುಟ್ಟರಾಜ ಗವಾಯಿಗಳ 15ನೇ ಪುಣ್ಯಸ್ಮರಣೋತ್ಸವ, ‘ಗುರುಸೇವಾ ರತ್ನ’ ಹಾಗೂ ‘ಹೆಬ್ಬಾಳದ ವರಕವಿ ರತ್ನ ಪ್ರಶಸ್ತಿ’ ಪ್ರದಾನ ಹಾಗೂ ಗ್ರಂಥ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಟ್ರಸ್ಟ್ನ ಅಧ್ಯಕ್ಷ ಸಿದ್ಧಾರೂಢ ಅವರಳ್ಳಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕ ಬಸವರಾಜ ಮತ್ತಿಮಡು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀಶೈಲದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಶಾಸಕ ಅಲ್ಲಮಪ್ರಭು ಪಾಟೀಲ ಸೇರಿದಂತೆ ಹಲವರು ಭಾಗವಹಿಸುವರು. ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಅಧ್ಯಕ್ಷತೆ ವಹಿಸುವರು’ ಎಂದರು.

‘ಕಾರ್ಯಕ್ರಮದಲ್ಲಿ ಸಾಧಕರಿಗೆ ‘ಗುರುಸೇವಾ ರತ್ನ’ ಹಾಗೂ ‘ಹೆಬ್ಬಾಳದ ವರಕವಿ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಗ್ರಂಥವನ್ನೂ ಬಿಡುಗಡೆ ಮಾಡಲಾಗುವುದು. ಬಳಿಕ ಪ್ರಸಿದ್ಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ’ ಎಂದು ಹೇಳಿದರು.

ಸಂಗಮೇಶ, ಬಸವರಾಜ ನಿಂಗಶೆಟ್ಟಿ, ಬೈಲಪ್ಪ ಹೇರೂರ, ಅರುಣಕುಮಾರ ಚೇಂಗಟಿ ಸೇರಿ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-34-1801267999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.