ಕಾಳಗಿ: ‘ನನ್ನನ್ನು ಪೂಜಿಸಿ, ಕುಣಿದು ಕುಪ್ಪಳಿಸಿ ಮೋಜು ಮಸ್ತಿ ಮಾಡುವ ಕೋಟಿ ಜನರ ಬದಲು ನನ್ನನ್ನು ಓದಿ, ತಿಳಿದುಕೊಂಡು ಅನುಸರಿಸುವ ನಾಲ್ಕೇ ನಾಲ್ಕು ಸಿಂಹಗಳಂತಹ ವ್ಯಕ್ತಿಗಳು ಮಾತ್ರ ಈ ದೇಶಕ್ಕೆ ಬೇಕು. ಇಂಥವರಿಂದಲೇ ಮಾತ್ರ ಈ ಸಮಾಜ ಬದಲಾವಣೆಯಾಗಲು ಸಾಧ್ಯವೆಂಬುದು ಬಾಬಾಸಾಹೇಬ ಅಂಬೇಡ್ಕರ್ ಆಶಯವಾಗಿತ್ತು’ ಎಂದು ಮೈಸೂರು-ಕೋಡ್ಲಾದ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ಶುಕ್ರವಾರ ಇಲ್ಲಿನ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ತಾಲ್ಲೂಕು ಮಟ್ಟದ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ಎಂದರೆ ಸಂವಿಧಾನದ ಆಶಯ. ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ಗೌರವ ಕೊಡಬೇಕಾದ ಏಕೈಕ ವ್ಯಕ್ತಿಯೇ ಅಂಬೇಡ್ಕರ್. ಮಹಾತ್ಮರ ಮಹಾತ್ಮನೇ ಅಂಬೇಡ್ಕರ್. ಅವರನ್ನು ಅಧ್ಯಯನ ಮಾಡಿ ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ ನೀಡಿ ಸುಶಿಕ್ಷತರನ್ನಾಗಿ ಮಾಡಿದಾಗ ಮಾತ್ರ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ’ ಎಂದು ನುಡಿದರು.

ಮೈಸೂರಿನ ಅಂಬೇಡ್ಕರ್ವಾದಿ ಕೇಶವಮೂರ್ತಿ ಮಾತನಾಡಿ, ‘ಬ್ರಿಟಿಷರು ಭಾರತದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ನೆಲೆಗೊಳಿಸಬೇಕೆಂಬ ಆಸೆ ಇರುತ್ತದೆ. ಆದರೆ, ಅವರಿಗೆ ಪ್ರಜಾಪ್ರಭುತ್ವದ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಗೊತ್ತಿರುವುದಿಲ್ಲ. ಅಂಥಹವರಿಗೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಿದವರೇ ಅಂಬೇಡ್ಕರ್. ನಮ್ಮ ದೇಶ ನಡೆಯುತ್ತಿರುವುದೇ ಪ್ರಜಾಪ್ರಭುತ್ವದ ಕಲ್ಪನೆ ಮತ್ತು ಸಂವಿಧಾನದ ಆಶಯಗಳ ಮೇಲೆ’ ಎಂದು ವಿವರಿಸಿದರು.

ಜಿಲ್ಲಾ ಕಾಂಗ್ರೆಸ್ ಮುಖಂಡ ಭೀಮರಾವ ಟಿ.ಟಿಯವರು ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು. ಪ್ರಾರಂಭದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲೆ ಹಾಕಿ ದೀಪ ಬೆಳಗಿಸಲಾಯಿತು. ಶಾಸಕ ಡಾ.ಅವಿನಾಶ ಜಾಧವ ಅವರು ಅಂಬೇಡ್ಕರ್ ಪ್ರತಿಮೆಗೆ ಹೂಮಾಲೆ ಸಲ್ಲಿಸಿ ಧ್ವಜಾರೋಹಣ ಮಾಡಿದರು. ರಕ್ತದಾನ ಶಿಬಿರ ಜರುಗಿತು.

ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷ ಮಾರುತಿ ಮಳಗಿ, ಕಪಿಲ್ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಇಒ ಬಸಲಿಂಗಪ್ಪ ಡಿಗ್ಗಿ ಮಾತನಾಡಿದರು. ಪ.ಪಂ ಮುಖ್ಯಾಧಿಕಾರಿ ಪಂಕಜಾ ಎ., ಗ್ರೇಡ್-2 ತಹಶೀಲ್ದಾರ್ ರಾಜೇಶ್ವರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ, ಸಂತೋಷ ಪತಂಗೆ, ಶಂಕರ ಹೇರೂರ, ರಮೇಶ ಕಿಟ್ಟದ, ಗುರುರಾಜ ಮದ್ದೂರ ಸೇರಿದಂತೆ ಅನೇಕರು ಇದ್ದರು.

ಪ್ರಿಯಾಂಕಾ ದಂಡಿನ್ ನಿರೂಪಿಸಿದರು. ಮಲ್ಲಿಕಾರ್ಜುನ ಗಂವಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-10637421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.