ಕಾಳಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಪಟ್ಟಣದಲ್ಲಿ ಶನಿವಾರ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಸದಸ್ಯ ಬಸವರಾಜ ಮಡಿವಾಳ, ‘ಸರ್ಕಾರ ತಂಬಾಕು ಸೇರಿದಂತೆ ಯಾವುದನ್ನು ನಿಷೇಧ ಮಾಡುವುದು ಅಸಾಧ್ಯ. ನಾವು ಉಪಯೋಗಿಸದೆ ಇದ್ದಾಗ ಅದು ತಾನಾಗಿಯೇ ಬೆಲೆ ಕಳೆದುಕೊಳ್ಳತ್ತದೆ. ನಾವು ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತರಾದರೆ ಆರೋಗ್ಯಯುತ ಸದೃಢ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ’ ಎಂದರು.

ಜಿಲ್ಲಾ ಜಾಗೃತಿ ವೇದಿಕೆ ಸದಸ್ಯ ಅವಿನಾಶ ಕೊಡದೂರ ಮಾತನಾಡಿ ‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ನಾಡಿನ ಸರ್ವಾಂಗೀಣ ವಿಕಾಸಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಕೊಟ್ಟು ಧರ್ಮಸ್ಥಳದ ಯೋಜನೆಗಳ ಬಗ್ಗೆ ತಿಳಿದುಕೊಂಡು ಬದುಕು ಸಾರ್ಥಕ ಮಾಡಿಕೊಳ್ಳಬೇಕು’ ಎಂದರು.

ಗುಂಡಪ್ಪ ಕರೆಮನೋರ ಮಾತನಾಡಿದರು. ವೀರಭದ್ರಗೌಡ ನಿರೂಪಿಸಿದರು. ಜ್ಯೋತಿ, ಕವಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-31-142672067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.