ಕನಕಗಿರಿ: ಜಗಜ್ಯೋತಿ ಬಸವೇಶ್ವರರು ತಮ್ಮ ವಚನಗಳ ಮೂಲಕ ಆಗಿನ ಸಮಾಜದಲ್ಲಿ ಬೇರೂರಿದ್ದ ಅಂಕುಡೊಂಕು ತಿದ್ದಿದ ಮಹಾನ್ ದಾರ್ಶನಿಕ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ ತಿಳಿಸಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇಲ್ಲಿನ ವೀರಶೈವ ಲಿಂಗಾಯತ ಸಮಾಜದ ಸಹಯೋಗದಲ್ಲಿ ಬಸವೇಶ್ವರ ವೃತ್ತದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರು ಗೊಡ್ಡು ಸಂಪ್ರದಾಯ, ಕಂದಾಚಾರ, ಧಾರ್ಮಿಕ ಮೌಢ್ಯ ಇತರೆ ಸಾಮಾಜಿಕ ಪಿಡುಗುಗಳ ವಿರುದ್ದ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದರು ಎಂದು ತಿಳಿಸಿದರು. ಪಿಐ ನಾರಾಯಣ ವಿ. ಮಾತನಾಡಿ, ಆಗಿನ ಸಾಮಾಜಿಕ ವ್ಯವಸ್ಥೆಯಲ್ಲಿ ಬಸವಣ್ಣನವರು ಉನ್ನತ ಕುಲದಲ್ಲಿ ಜನಿಸಿದರೂ ಎಲ್ಲಾ ವರ್ಗದವರಿಗೂ ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು ಎಂದು ತಿಳಿಸಿದರು.

ತಹಶೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, 'ಸತ್ಯ ಮಾರ್ಗದಲ್ಲಿ ನಡೆದರೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುವ ಶಕ್ತಿ ಬರುತ್ತದೆ ಎಂಬುದನ್ನು ಬಸವಣ್ಣನ ವಚನಗಳ ಮೂಲಕ ಮನದಟ್ಟು ಮಾಡಿಕೊಳ್ಳಬೇಕು ಎಂದರು.

ತಾ.ಪಂ.ಪ್ರಭಾರ ಇಒ ರಾಜಶೇಖರ, ಪ.ಪಂ. ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ವಕ್ತಾರ ಶರಣಬಸಪ್ಪ ಭತ್ತದ, ನಿವೃತ್ತ ಶಿಕ್ಷಕ ದೊಡ್ಡಪ್ಪ ಭಾವಿಕಟ್ಟಿ, ನೀಲಕಂಠ ಬಡಿಗೇರ ಮಾತನಾಡಿದರು.

ಪ.ಪಂ. ಉಪಾಧ್ಯಕ್ಷ ಕಂಠಿರಂಗ ನಾಯಕ, ಖಜಾನಾಧಿಕಾರಿ ದುರ್ಗಾಸಿಂಗ್, ಅರಣ್ಯ ವಲಯ ಪಾಲಕ ಮಹಾಂತೇಶ ಕುಂಬಾರ, ಮೇಲ್ವಿಚಾರಕರಾದ ಹುಸೇನಬೀ, ಪಂಪನಗೌಡ, ಸಿಆರ್ಪಿ ವಿಜಯ ಕುಮಾರ ಹೊಸಳ್ಳಿ, ಜಿ.ಪಂ. ಮಾಜಿ ಸದಸ್ಯ ವೀರೇಶ ಸಮಗಂಡಿ, ಬಿಜೆಪಿ ಮಂಡಲ ಅಧ್ಯಕ್ಷ ಸಣ್ಣ ಕನಕಪ್ಪ, ಮಾಜಿ ಅಧ್ಯಕ್ಷ ಮಹಾಂತೇಶ ಸಜ್ಜನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಪ.ಪಂ. ಸದಸ್ಯರಾದ ಸಂಗಪ್ಪ ಸಜ್ಜನ, ಸುರೇಶ ಗುಗ್ಗಳಶೆಟ್ರ, ಅನಿಲಕುಮಾರ ಬಿಜ್ಜಳ, ಶೇಷಪ್ಪ ಪೂಜಾರ, ಸಿದ್ದೇಶ ಕಲ್ಲಬಾಗಿಲಮಠ, ರಾಕೇಶ ಕಂಪ್ಲಿ, ಗಂಗಾಧರ ಚೌಡ್ಕಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ವಾಗೀಶ ಹಿರೇಮಠ, ಪ್ರಶಾಂತ ಪ್ರಭುಶೆಟ್ಟರ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-35-583971928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.