ಕಾರವಾರ: ‘ಬಸವಣ್ಣ ಸಾರಿದ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆ ಇಲ್ಲ. ಅವು ಸಾಮಾಜಿಕ ಅಸಮಾನತೆ, ಮೌಢ್ಯತೆಯನ್ನು ಹೋಗಲಾಡಿಸಲು ನೆರವಾಗಿವೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನ್ಯೂ ಕೆ.ಎಚ್.ಬಿ ಕಾಲೊನಿಯ ಬ್ರಹ್ಮಕುಮಾರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜಗತ್ತು ಕಂಡ ಬಹು ದೊಡ್ಡ ಸಮಾಜ ಸುಧಾರಕರಲ್ಲಿ ಬಸವಣ್ಣ ಮೇಲ್ಪಂಕ್ತಿಯಲ್ಲಿ ಕಾಣಸಿಗುತ್ತಾರೆ. ಮೇಲು ಕೀಳು, ಜಾತಿ ಧರ್ಮ, ಮಡಿಮೈಲಿಗೆ ತುಂಬಿದ್ದ ಸಮಯದಲ್ಲಿ ಅವರು ನೊಂದವರ, ದೀನದಲಿತರ ಉದ್ಧಾರಕ್ಕೆ ನಿಂತವರು. ಕೆಳವರ್ಗದವರನ್ನು ಮೇಲ್ವರ್ಗದವರು ಅತ್ಯಂತ ಹೀನಾಯವಾಗಿ ಕಾಣುತಿದ್ದ ಆ ಅನ್ಯಾಯವನ್ನು ಹೋಗಲಾಡಿಸಲೆಂದೇ ಬಸವಣ್ಣನವರ ಕಲ್ಯಾಣದಲ್ಲಿ ಕ್ರಾಂತಿಯ ಬೀಜ ಬಿತ್ತಿದರು’ ಎಂದರು.

ತಾಲ್ಲೂಕು ಪಂಚಾಯಿತಿ ಇಒ ವೀರಣ್ಣ ಏಗನಗೌಡರ ಮಾತನಾಡಿ, ‘12ನೇ ಶತಮಾನದಲ್ಲಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಪ್ರತಿಯೊಬ್ಬರು ಸಮಾನರು ಎಂಬ ಮನೋಭಾವವನ್ನು ಬಸವಣ್ಣ ಬಿತ್ತಿದ್ದರು’ ಎಂದರು.

ಉಪನ್ಯಾಸ ನೀಡಿದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ಕವಿತ ಅಕ್ಕನವರು, ‘ಬಸವಣ್ಣನವರ ಜಯಂತಿ ಕ್ರಾಂತಿಯ ಸ್ಮರಣೆಯಾಗಿದೆ. ಭಕ್ತಿಯ ಅಡಿಪಾಯದಲ್ಲಿ ಸಮಾಜದ ಸುಧಾರಣೆ ಮಾಡಿದವರು’ ಎಂದರು.

ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತೆ ಸುಧಾ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರ, ವೀರಶೈವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಹಿರೇಮಠ, ಶಿಕ್ಷಕ ಕೃಷ್ಣಮೂರ್ತಿ ಶಿವು ಹುಳ್ಸೆಮಕ್ಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-20-1764412920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.