ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮೇ 13ರಿಂದ 18ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.

ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 13ರಂದು ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ಅಂಕುರಾರ್ಪಣೆ, ವಾಸ್ತು ರಾಕ್ಷೋಘ್ನ ಹೋಮ ನೆರವೇರಲಿದೆ.

ಮೇ 14ರಂದು ಗಣಪತಿ ಹೋಮ ಅಂಕುರ ಪೂಜೆ, ಬಿಂಬಶುದ್ಧಿ ಕಲಶ ಪೂಜೆ, ಕಲಶಾಭಿಷೇಕ ಪ್ರಾಯಶ್ಚಿತ ಹೋಮಗಳು ನೆರವೇರಲಿವೆ. ರಾತ್ರಿ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ನೆರವೇರಲಿವೆ. ಮೇ 15ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, ಅಂಕುರ ಪೂಜೆ, ಶಾಂತಿ ಹೋಮ, ಕಲಶಾಭಿಷೇಕ ನಡೆಯಲಿದ್ದು ಮಧ್ಯಾಹ್ನ ಪೂಜೆ ಹಾಗೂ ರಾತ್ರಿ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ನಡೆಯಲಿವೆ.

ಮೇ 16ರಂದು ಬೆಳಿಗ್ಗೆ 7ರಿಂದ ಗಣಪತಿ ಹೋಮ, ಅಂಕುರ ಪೂಜೆ, ತತ್ವ ಹೋಮ, ತತ್ವ ಕಲಶ ಪೂಜೆ, ತತ್ವ ಕಲಶಾಭಿಷೇಕ ನಡೆಯಲಿದೆ. ಮೇ 17ರಂದು ಬೆಳಿಗ್ಗೆ 7ರಿಂದ ವಿವಿಧ ಪೂಜೆ, ಅಧಿವಾಸ ಹೋಮಗಳು ನಡೆಯಲಿವೆ. ಮೇ 18ರಂದು ಬೆಳಿಗ್ಗೆ 8ರಿಂದ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಪೂಜೆ ಪ್ರಸಾದ ವಿತರಣೆ ಮಂತ್ರಾಕ್ಷತೆ ಜರುಗಲಿದೆ ಎಂದು ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ ಹಾಗೂ ದೇವಸ್ಥಾನದ ಅಧ್ಯಕ್ಷ ರಾಜ ಪೂವಣ್ಣ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-51-1221373596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.