ಮಡಿಕೇರಿ: ಹನ್ನೆರಡನೇ ಶತಮಾನದ ಶರಣರ ವಚನಗಳನ್ನು ಪ್ರಸ್ತುತ ದಿನಮಾನಗಳಲ್ಲಿ ದಿನಕ್ಕೊಂದು ಕಲಿತರೆ ನಾವೆಲ್ಲರೂ ಮನುಷ್ಯರಾಗಬಹುದು, ಉತ್ತಮ ಸಮಾಜ ನಿರ್ಮಾಣವಾಗಬಲ್ಲುದು ಎಂದು ಶಿಕ್ಷಕ ಮೇ.ನಾ.ವೆಂಕಟನಾಯಕ ಹೇಳಿದರು.

ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಆಯೋಜಿಸಿದ್ದ ವಿಜಯಾ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ‘ಜಲಜಾ ಶೇಖರ್ ಹಾಗೂ ಜೆ.ಸಿ.ಶೇಖರ್ ದತ್ತಿ ಉಪನ್ಯಾಸ’ದಲ್ಲಿ ‘ವಚನ ಸಾಹಿತ್ಯದ ಹಿರಿಮೆ’ ಕುರಿತು ಅವರು ಮಾತನಾಡಿದರು.

ವಚನಕಾರ ದೇವರದಾಸಿಮಯ್ಯ ಸಮಾಜದ ಡಾಂಬಿಕತನವನ್ನು ತಮ್ಮ ವಚನಗಳಲ್ಲಿ ವಿಡಂಬನೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, ಹನ್ನೊಂದನೇ ಶತಮಾನದ ಕೊನೆಯ ಭಾಗ ಮತ್ತು 12ನೇ ಶತಮಾನದಲ್ಲಿದ್ದ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ನಮ್ಮ ಸುತ್ತಮುತ್ತಲ ಸಮಾಜದ ಡಾಂಭಿಕತವನ್ನು ಬಯಲಿಗೆಳೆಯುವ ಮೂಲಕ ನವ ಸಮಾಜದ ನಿರ್ಮಾಣಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದರು. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯರ ವಚನಗಳನ್ನು ಉಲ್ಲೇಖಿಸಿ, ಇವರೆಲ್ಲರೂ ಮಾನವ ಜನ್ಮ ಅತ್ಯಂತ ಶ್ರೇಷ್ಠವಾದದ್ದು, ಅದನ್ನು ವ್ಯರ್ಥಮಾಡದೆ, ಸಮಾನತೆಯ ಪರಿಕಲ್ಪನೆಯೊಂದಿಗೆ, ಕಾಯಕ ತತ್ವದ ಮೂಲಕ ಬದುಕನ್ನು ಸಾರ್ಥಕಗೊಳಿಸಬೇಕು ಎಂದು ಹೇಳಿದರು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ‘ಕೊಡಗು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 40 ದತ್ತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ವಿಜಯಾ ವಿಷ್ಣುಭಟ್ ಅವರು ಜಿಲ್ಲೆಯಲ್ಲಿ ಸುದೀರ್ಘಾವಧಿ ಶಿಕ್ಷಕರಾಗಿದ್ದು, ಅವರ ಅಪೇಕ್ಷೆಯಂತೆ ದತ್ತಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಮೊದಲ ಬಾರಿಗೆ ಈ ದತ್ತಿ ಪ್ರಶಸ್ತಿಯನ್ನು ಲೇಖಕಿ ಸ್ಮಿತಾ ಅಮೃತರಾಜ್ ಅವರಿಗೆ ಪ್ರದಾನ ಮಾಡಲಾಗಿತ್ತು, ಈ ಬಾರಿ ಪ್ರತಿಮಾ ಹರೀಶ್ ರೈ ಅವರಿಗೆ ಪುರಸ್ಕರಿಸುತ್ತಿರುವುದಾಗಿ ಮಾಹಿತಿ ನೀಡಿದರು.

ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ದತ್ತಿ ದಾನಿಗಳಾದ ಜಲಜಾ ಶೇಖರ್ ಮತ್ತು ಜೆ.ಸಿ.ಶೇಖರ್, ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಎಸ್.ಪ್ರತಿಭಾ, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ಕಾಲೇಜು ವಿದ್ಯಾರ್ಥಿನಿಯರಾದ ಸ್ವಪ್ನ, ಚೋಂದಮ್ಮ, ಶಿಲ್ಪಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1075411538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.