ಲಕ್ಷ್ಮೇಶ್ವರ: ‘ಪ್ರತಿದಿನವೂ ಕಾಯಕವೇ ಕೈಲಾಸ ಎಂಬ ಮಾರ್ಗದಲ್ಲಿ ಕೆಲಸ ನಿರ್ವಹಿಸಬೇಕು. ಕಷ್ಟಪಟ್ಟು ದುಡಿದಾಗ ಮಾತ್ರ ಮನುಷ್ಯನ ಜೀವನ ಸಾರ್ಥಕವಾಗುತ್ತದೆ’ ಎಂದು ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಇಲ್ಲಿನ ಎಸ್ಎಸ್ಕೆ ಸಮಾಜದ ಅಂಬಾಭವಾನಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕಳಸಾರೋಹಣ, ಮೂರ್ತಿಗಳ ಪ್ರತಿಷ್ಠಾಪನೆ, ಸಮುದಾಯ ಭವನ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಎಸ್ಎಸ್ಕೆ ಸಮಾಜ ಸಣ್ಣ ಸಮುದಾಯವಾದರೂ ಕಾಯಕವೇ ಕೈಲಾಸ ಎಂದು ನಂಬಿದೆ. ಈ ಸಮಾಜದ ಪ್ರತಿಯೊಬ್ಬರೂ ಪ್ರತಿದಿನ ಕೆಲಸ ಮಾಡಿ ಬದುಕು ಸಾಗಿಸುತ್ತಿರುವುದು ಹೆಮ್ಮೆಯ ಸಂಗತಿ. ಎಲ್ಲ ಸಮಾಜದವರು ಪ್ರಾಮಾಣಿಕವಾಗಿ ದುಡಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’ ಎಂದರು.

‘ಅಭಿವೃದ್ಧಿ ಹೊಂದುತ್ತಿರುವ ಪಟ್ಟಣದಲ್ಲಿ ಎಸ್ಎಸ್ಕೆ ಸಮಾಜದವರು ಒಗ್ಗಟ್ಟಾಗಿ ಸುಂದರ ಹಾಗೂ ಸುಸಜ್ಜಿತ ಕಲ್ಯಾಣ ಮಂಪಟ ನಿರ್ಮಿಸಿದ ಕಾರ್ಯ ಶ್ಲಾಘನೀಯ. ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಈ ಸಮಾಜ ಜಗತ್ತಿಗೆ ಇತತರರಿಗೆ ತಿಳಿಸಿದೆ’ ಎಂದರು.

ಎಸ್ಎಸ್ಕೆ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪರಶುರಾಮಸಾ ಬದಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಮಾತನಾಡಿದರು. ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ, ವಿಶ್ವನಾಥ ಮಹಾಂತಶೆಟ್ಟರ ಇದ್ದರು. ಈಶ್ವರ ಮೆಡ್ಲೇರಿ ಸ್ವಾಗತಿಸಿದರು. ಹನಮಂತಸಾ ಚೌಧರಿ ಪ್ರಾರ್ಥನೆ ಗೀತೆ ಹಾಡಿದರು. ರಂಗನಾಥಸಾ ಬದಿ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-23-263797371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.