ಲಕ್ಷ್ಮೇಶ್ವರ: ‘ಶಂಕರಾಚಾರ್ಯರು ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಗಳಲ್ಲಿ ಒಬ್ಬರು. ಹಿಂದೂ ಧರ್ಮದ ಪುನರುತ್ಥಾನಕ್ಕೆ ಅವರು ನೀಡಿದ ಕೊಡುಗೆ ಅಪಾರ’ ಎಂದು ಬ್ರಹ್ಮವೃಂದದ ಅಧ್ಯಕ್ಷ ಗೋಪಾಲ ಪಡ್ನೀಸ್ ತಿಳಿಸಿದರು.

ಪಟ್ಟಣದ ಶಂಕರಭಾರತಿಮಠದಲ್ಲಿ ಬ್ರಹ್ಮವೃಂದ ಮತ್ತು ಶಂಕರ ಸೇವಾ ಸಮಿತಿ ಆಶ್ರಯದಲ್ಲಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸಂಗೀತ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಶಂಕರಾಚಾರ್ಯರು ಸಮಾಜದಲ್ಲಿ ಸಮಾನತೆ ಬಿತ್ತುವ ಕೆಲಸ ಮಾಡಿದ್ದಾರೆ. ಆಳವಾದ ಅಧ್ಯಯನದಿಂದ ಚಿಕ್ಕ ವಯಸ್ಸಿನಲ್ಲಿಯೇ ಅಪಾರ ಜ್ಞಾನ ಸಂಪಾದಿಸಿದ್ದರು. ಬ್ರಾಹ್ಮಣ ಸಮುದಾಯದ ಮಕ್ಕಳು ಪರೀಕ್ಷೆಯಲ್ಲಿ ಮಾಡಿದ ಸಾಧನೆ ಶ್ಲಾಘನೀಯ’ ಎಂದರು.

ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೃಷ್ಣ ಕುಲಕರ್ಣಿ ಮಾತನಾಡಿದರು.

ಈ ವೇಳೆ ಸಮಾಜದ ವತಿಯಿಂದ ಪಂ.ಚಿದಂಬರ ಜೋಶಿ ಅವರಿಗೆ ವಿಪ್ರ ಕಲಾಶ್ರೀ ಪ್ರಶಸ್ತಿ ನೀಡಲಾಯಿತು. ದಿಲೀಪ ಜೋಶಿ ದಂಪತಿ ಹಾಗೂ ಶಹನಾಯಿ ವಾದಕ ಕೃಷ್ಣಾಜಿ ಕ್ಷತ್ರೀಯ ದಂಪತಿಗಳನ್ನು ಸನ್ಮಾನಿಸಲಾಯಿತು. ಗುರುರಾಜ ಪಾಟೀಲಕುಲಕರ್ಣಿ, ಅರವಿಂದ ದೇಶಪಾಂಡೆ, ದೃವರಾಜ ಬೆಟಗೇರಿ, ಡಾ.ಪ್ರಸನ್ನ ಕುಲಕರ್ಣಿ, ನಾರಾಯಣಭಟ್ ಪುರಾಣಿಕ, ರಾಜಾಚಾರ್ಯ ರಾಯಚೂರ, ಎ.ಪಿ. ಕುಲಕರ್ಣಿ, ಕೃಷ್ಣಕುಮಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-362197745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.