ಲಿಂಗಸುಗೂರು: ನೈತಿಕ ಮೌಲ್ಯಗಳು ಹಾಗೂ ಸಂಸ್ಕಾರಗಳು ಮಕ್ಕಳ ಭವಿಷ್ಯದ ಬುನಾದಿಯಾಗಿವೆ ಎಂದು ಯರಡೋಣಾ ಸಿದ್ಧರಾಮೇಶ್ವರ ಗುರುಮಠದ ಪೀಠಾಧಿಪತಿ ಮುರುಘೇಂದ್ರ ಶಿವಯೋಗಿ ಹೇಳಿದರು. ತಾಲ್ಲೂಕಿನ ಯರಡೋಣಾ ಮಠದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ವೈದಿಕ ಸಂಸ್ಕಾರ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವೇಗದ ಜೀವನದ ಶೈಲಿಯಲ್ಲಿ ಮಕ್ಕಳಿಗೆ ಪಾಲಕರು ಶಿಕ್ಷಣ ನೀಡುವತ್ತ ಆದ್ಯತೆ ನೀಡುತ್ತಿದ್ದಾರೆ ಆದರೆ ಸಂಸ್ಕಾರದ ಅರಿವು ಮಕ್ಕಳಿಗಿಲ್ಲದಾಗಿದೆ. ಪಾಲಕರಿಗೆ, ಗುರು,ಹಿರಿಯರಿಗೆ ಗೌರವ ನೀಡುವ, ಧಾರ್ಮಿಕ ಪ್ರಜ್ಞೆ, ಸಹಾನುಭೂತಿಯಂತಹ ಮೌಲ್ಯಗಳನ್ನು ಚಿಕ್ಕ ವಯಸ್ಸಿನಲ್ಲೇ ಕಲಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗೆ ಸಂಸ್ಕಾರ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಸಂಸ್ಕಾರಯುತ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದರು.

ಅಮರೇಶ್ವರ ದೇವಸ್ಥಾನದ ಅರ್ಚಕ ಗಂಗಾಧರಯ್ಯ ಶಾಸ್ತ್ರೀ, ಶಿಕ್ಷಕ ಮಹಾಂತಗೌಡ ಬಯ್ಯಾಪುರ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-32-941701611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.