ಮನಗೂಳಿ: ಮನಗೂಳಿ ಹಿರೇಮಠವು ಭವ್ಯ ಗುರು ಪರಂಪರೆಯ ಇತಿಹಾಸವನ್ನು ಹೊಂದಿದೆ. ಮಠವು ಕೇವಲ ಧಾರ್ಮಿಕ ಕೇಂದ್ರವಾಗಿರದೆ ಬಡ ಮಕ್ಕಳಿಗೆ ಶಿಕ್ಷಣ, ಆಶ್ರಯ, ದಾಸೋಹ ನೀಡುವುದರ ಜೊತೆಗೆ ಬಡವರ ಅನುಕೂಲಕ್ಕಾಗಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಮುತ್ತಗಿ ಹಿರೇಮಠದ ವೀರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಮನಗೂಳಿ ಹಿರೇಮಠದ ಲಿಂ. ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳವರ 43ನೇ ಪುಣ್ಯಾರಾಧನೆ ಹಾಗೂ ಜಗದ್ಗುರು ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 13ನೇ ಯಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧರ್ಮಸಭೆ ಹಾಗೂ ರಾಜ್ಯಮಟ್ಟದ ಸಂಗನಬಸವ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಯರನಾಳ ವಿರಕ್ತಮಠದ ಸಂಗನಬಸವ ಸ್ವಾಮೀಜಿ ಮಾತನಾಡಿ, ಪ್ರಸ್ತುತ ಪೀಠಾಧ್ಯಕ್ಷರಾದ ಅಭಿನವ ಸಂಗನಬಸವ ಸ್ವಾಮೀಜಿ ಅವಳಿ ಜಿಲ್ಲೆಯ ಭಕ್ತರ ಮನಸ್ಸು ಗೆದ್ದಿರುವ ಯುವ ಸ್ವಾಮೀಜಿಗಳಾಗಿದ್ದಾರೆ. ಮಠದಲ್ಲಿ ಸುಮ್ಮನೆ ಕುಳಿತುಕೊಳ್ಳದೆ, ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸದಾ ಭಕ್ತರ ಊರುಗಳಿಗೆ ಸಂಚರಿಸಿ, ಎಲ್ಲರನ್ನೂ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸುವ ಇಂತಹ ಕ್ರಿಯಾಶೀಲ ಪೂಜ್ಯರನ್ನು ಪಡೆದ ಮನಗೂಳಿ ಭಕ್ತರೇ ಪುಣ್ಯವಂತರು ಎಂದು ಪ್ರಶಂಸಿಸಿದರು.

ಸಮಾರಂಭದ ನೇತೃತ್ವ ವಹಿಸಿದ್ದ ಶ್ರೀಮಠದ ಪೀಠಾಧ್ಯಕ್ಷರಾದ ಅಭಿನವ ಸಂಗನಬಸವ ಶಿವಾಚಾರ್ಯರು ಮಾತನಾಡಿ, ಲಿಂ. ಉಭಯ ಪೂಜ್ಯರು ಕಂಡಿದ್ದ ಭವ್ಯ ಕನಸುಗಳನ್ನು ಭಕ್ತರ ಸಹಾಯದಿಂದ ಶ್ರೀಮಠದ ಸೇವೆಯ ಮೂಲಕ ನನಸು ಮಾಡುತ್ತಿದ್ದೇನೆ. ಇನ್ನುಳಿದ ಕೆಲವು ಯೋಜನೆ ಹಾಗೂ ಕನಸುಗಳನ್ನು ಮುಂದಿನ ಕೆಲವೇ ವರ್ಷಗಳಲ್ಲಿ ಈಡೇರಿಸುವ ದೃಢ ಸಂಕಲ್ಪ ತೊಟ್ಟಿದ್ದೇನೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಬಸವನಬಾಗೇವಾಡಿಯ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರ ಬಸವರಾಜ್ ಭದ್ರಗೊಂಡ ಅವರಿಗೆ ‘ರಾಜ್ಯಮಟ್ಟದ ಶ್ರೀ ಸಂಗನಬಸವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಜಾತ್ರೋತ್ಸವ ನಿಮಿತ್ತ ಶ್ರೀಮಠದ ವತಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಅಡ್ಡ ಪಲ್ಲಕ್ಕಿ ಮಹೋತ್ಸವ, ಮಹಿಳೆಯರಿಂದ ವೈಭವದ ರಥೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ್ ಮನಗೂಳಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಕನ್ನೊಳ್ಳಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-26-1656254080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.