ಮಂಡ್ಯ: ‘ಮನುಕುಲದ ರಕ್ಷಣೆಗಾಗಿ ಅವತರಿಸಿ ಅನ್ಯಾಯದ ವಿರುದ್ಧ ಹೋರಾಡಿದ ಅಗ್ನಿಬನ್ನಿರಾಯರ ವಂಶಸ್ಥರು ಅಗತ್ಯ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ರೆಡ್ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ತಿಳಿಸಿದರು.

ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ನಡೆದ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಗ್ನಿಬನ್ನಿರಾಯರ ಅವತಾರ ಮತ್ತು ಅವರ ಹೋರಾಟಗಳು ಅವಿಸ್ಮರಣೀಯವಾದವು. ಅವರ ಬಗ್ಗೆ ತಿಳಿದುಕೊಳ್ಳುವುದೇ ವಿಶೇಷವಾದದ್ದು. ಅವರ ಧ್ಯೇಯೋದ್ದೇಶಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವುದು ಅಗತ್ಯವಾಗಿದೆ ಎಂದರು.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಮಾತನಾಡಿ, ‘ಮಾನವ ಕಲ್ಯಾಣ ಮತ್ತು ರಕ್ಷಣೆಯಂತಹ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸಿರುವ ಅಗ್ನಿವಂಶ ಕ್ಷತ್ರಿಯ ಕುಲದವರು ರಾಜಕೀಯ ಮಾನ್ಯತೆ, ಸಾಮಾಜಿಕ ಸಮಾನತೆ ಹಾಗೂ ಆರ್ಥಿಕ ಬಲವರ್ಧನೆಗಾಗಿ ಹೋರಾಟ ಮಾಡಬೇಕು. ತಮ್ಮ ಹಕ್ಕುಗಳನ್ನು ಪಡೆದುಕೊಂಡು ತಮ್ಮ ಮಕ್ಕಳನ್ನು ಉನ್ನತ ಹುದ್ದೆಗೆ ಅಲಂಕರಿಸುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಹವ್ಯಾಸಿ ಇತಿಹಾಸಕಾರ ಮಧುಸೂಧನ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಜಿ.ವಿ. ನಂದೀಶ್, ತಿಗಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುಮೂರ್ತಿ, ಪ್ರಧಾನ ಕಾರ್ಯದರ್ಶಿ ಅಕ್ಕಿಹೆಬ್ಬಾಳು ವಾಸು, ಮುಖಂಡರಾದ ನಾಗರತ್ನ, ಎಂ.ಬಿ. ರಮೇಶ್ ಭಾಗವಹಿಸಿದ್ದರು.

ಸಮಾರಂಭಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ಕಲಾಮಂದಿರದವರೆಗೆ ಜಾನಪದ ಕಲಾತಂಡಗಳೊಂದಿಗೆ ಅಗ್ನಿಬನ್ನಿರಾಯ ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಮೆರವಣಿಗೆಯಲ್ಲಿ ತರಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-40-962598789

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.