ಮಂಡ್ಯ: ‘ವಿಶ್ವಗುರು ಬಸವಣ್ಣ ಅವರು 12ನೇ ಶತಮಾನದಲ್ಲೇ ನೀಡಿದ ಸಮಸಮಾಜ ನಿರ್ಮಾಣದ ಸಂದೇಶ 21ನೇ ಶತಮಾನದಲ್ಲೂ ಪ್ರಸ್ತುತ’ ಎಂದು ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಕೆ.ಟಿ. ಹನುಮಂತು ಅಭಿಪ್ರಾಯಪಟ್ಟರು.

ನಗರದ ವೀರಶೈವ ವಿದ್ಯಾರ್ಥಿ ನಿಲಯ ಆವರಣದಲ್ಲಿ ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನಲ್ ಟ್ರಸ್ಟ್ ಕೊಪ್ಪ ವತಿಯಿಂದ ಆಯೋಜಿಸಿದ್ದ ಬಸವ ಜಯಂತಿ ಹಾಗೂ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಶ್ವದ ಮೊದಲ ಸಂಸತ್ ಎಂದೇ ಕರೆಯಲ್ಪಡುವ ಅನುಭವ ಮಂಟಪ ಎಂದೆಂದಿಗೂ ಅವಿಸ್ಮರಣೀಯ. ಎಲ್ಲಾ ಸಮುದಾಯದ ಕಾಯಕ ಯೋಗಿಗಳು ಅನುಭವ ಮಂಟಪದಲ್ಲಿ ಸಾಮಾಜಿಕ ಸುಧಾರಣೆಗೆ ವಚನಗಳ ಮೂಲಕ ಸಂದೇಶಗಳನ್ನು ನೀಡಿದ್ದಾರೆ ಎಂದು ಸ್ಮರಿಸಿದರು.

ಟ್ರಸ್ಟ್ ವತಿಯಿಂದ ‘ಬಸವಶ್ರೀ ಪ್ರಶಸ್ತಿ’ಯನ್ನು ಜಗದ್ಗುರು ಬಸವೇಶ್ವರ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಕೆ.ಎಸ್. ಷಡಕ್ಷರಿ ಅವರಿಗೆ ಪ್ರದಾನ ಮಾಡಲಾಯಿತು.

ರೆಡ್ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಮಾತನಾಡಿದರು.

ಬಸವಣ್ಣನವರನ್ನು ಕುರಿತು ಭವಾನಿ ಲೋಕೇಶ್ ಉಪನ್ಯಾಸ ನೀಡಿದರು. ಪ್ರತಿಭಾಂಜಲಿ ಡೇವಿಡ್ ಮತ್ತು ತಂಡದವರಿಂದ ವಚನ ಗಾಯನ ನಡೆಯಿತು.

ನಗರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದರಾಜು, ಜಿಲ್ಲಾ ಬಸವ ಸಮಿತಿ ಅಧ್ಯಕ್ಷ ಎಂ.ಬಿ. ರಾಜಶೇಖರ್, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್. ಶಿವಪ್ರಕಾಶ್ ಐಡಿಯಲ್, ಅಲಯನ್ಸ್ ಸಂಸ್ಥೆ 1ನೇ ಜಿಲ್ಲಾ ಉಪ ಗವರ್ನರ್ ಕೆ.ಎಸ್. ಚಂದ್ರಶೇಖರ್, ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ರಾಚಯ್ಯ, ಕಸಾಪ ದರಸಗುಪ್ಪೆ ಧನಂಜಯ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-1285142895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.