ಧಾರ್ಮಿಕ ತ್ಯಾಜ್ಯವನ್ನು ಗೌರವದಿಂದ ವಿಲೇವಾರಿ ಮಾಡಲು ಜನ ಬಯಸಿದರೂ, ಅದಕ್ಕೆ ಸೂಕ್ತ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಡಿಸೆಂಬರ್‌ನಲ್ಲಿ ‘ವಿಸರ್ಜನೆ’ ಅಭಿಯಾನ ನಡೆಸಲು ನಿರ್ಧರಿಸಿದ್ದೇವೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಇದೆ. ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳಲ್ಲಿ ಶಾಶ್ವತ ‘ಧಾರ್ಮಿಕ ತ್ಯಾಜ್ಯ ವಿಲೇವಾರಿ ಹುಂಡಿ’ಗಳನ್ನು ಸ್ಥಾಪಿಸಿದರೆ ಭಕ್ತರಿಗೆ ಅನುಕೂಲವಾಗುತ್ತದೆ. ಇದರಿಂದ ಧಾರ್ಮಿಕ ತ್ಯಾಜ್ಯದ ಸಮಸ್ಯೆಗೆ ಪರಿಹಾರ ದೊರೆಯಬಹುದು. ಸರ್ಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ಸಂಘ–ಸಂಸ್ಥೆಗಳು ಮುಂದೆ ಬಂದರೆ ಅವರಿಗೆ ಮಾರ್ಗದರ್ಶನ ನೀಡಲು ನಾವು ಸಿದ್ಧರಿದ್ದೇವೆ.