ಮಂಗಳೂರು: ‘ನಿತ್ಯ ಮಂತ್ರ ಪಠಣದಿಂದ ಶರೀರದಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿಯಾಗಿ ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುತ್ತದೆ’ ಎಂದು ಉದ್ಯಮಿ ಹರಿಕೃಷ್ಣ ಪುನರೂರು ನುಡಿದರು.

ಕೂಟ ಮಹಾಜಗತ್ತು ಮಂಗಳೂರು ಘಟಕದ ಆಶ್ರಯದಲ್ಲಿ ಪಾಂಡೇಶ್ವರದ ಗುರು ನರಸಿಂಹ ಸಭಾಭವನದಲ್ಲಿ ಹಮ್ಮಿಕೊಂಡಿದ್ದ 25ನೇ ವರ್ಷದ ವಸಂತ ವೇದ ಪಾಠ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೊಳ್ಳ, ಶಿಬಿರದ ಗುರುಗಳಾದ ಶ್ರೀಕರ ಭಟ್ ಹಾಗೂ ಕಾರುಣ್ಯ ನಿಧಿ ಭಟ್ ಮಾತನಾಡಿದರು. ಮಕ್ಕಳು ಗುರುದ್ವಯರಿಗೆ ಗುರುವಂದನೆ ಸಲ್ಲಿಸಿದರು. ಶಿಬಿರದ ಬಗ್ಗೆ ಪೋಷಕರು ಮೆಚ್ಚುಗೆಯ ಮಾತುಗಳನ್ನಾಡಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರಭಾ ಎಸ್. ರಾವ್ ವ್ಯವಸ್ಥಾಪಕ ಶಿವರಾಂ ರಾವ್ ಕೋಶಾಧಿಕಾರಿ ಪದ್ಮನಾಭ ಮಯ್ಯ , ಕೃಷ್ಣ ಮಯ್ಯ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಮಾ ಶ್ರೀಧರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-29-697740946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.