ಮಸ್ಕಿ: ಮೂರು ವರ್ಷಕ್ಕೊಮ್ಮೆ ಬರುವ ಅಧಿಕ ಮಾಸದ ತಿಂಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜೀವನದಲ್ಲಿ ಪ್ರಗತಿ ಉಂಟಾಗುತ್ತದೆ ಎಂದು ಕುದರಿಮೋತಿ ಶಾಖಾ ಮಠದ ವಿಜಯಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ಗಚ್ಚಿನಮಠದಲ್ಲಿ ಭಾನುವಾರ ಜಂಗಮ ಸಮಾಜ ಸಂಘ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ವಿಶೇಷ ಪೂಜೆ ಹಾಗೂ ಜಂಗಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ಜಂಗಮ ಸಮಾಜವು ಇಂತಹ ವಿಶೇಷ ಪೂಜೆ ಹಮ್ಮಿಕೊಳ್ಳುವ ಮೂಲಕ ಸಮಾಜದ ಪ್ರಗತಿಗೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದರು.

ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ ಮಾತನಾಡಿ ಅಧಿಕ ಮಾಸದ ಬಗ್ಗೆ ವಿಶೇಷವಾಗಿ ಮತ್ತು ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರದ ಸಂಸ್ಕೃತಿಗಳ ಬಗ್ಗೆ ಮಾಹಿತಿ ನೀಡಿದರು.

ಮುಖಂಡ ವೀರೇಶ ಪಾಟೀಲ, ಎಪಿಎಂಸಿ ನಿರ್ದೇಶಕಿ ಪೂರ್ಣಿಮಾ ವಿ. ಪಾಟೀಲ, ಶರಭಯ್ಯ ಸ್ವಾಮಿ ಬಳಗಾನೂರ, ಜಂಗಮ ಸಮಾಜದ ತಾಲ್ಲೂಕ ಘಟಕದ ಅಧ್ಯಕ್ಷ ಘನಮಠದಯ್ಯ ಸಾಲಿಮಠ, ಶಿವಕುಮಾರ ಶಾಸ್ತ್ರೀಮಠ, ಅಮರಯ್ಯಸ್ವಾಮಿ ಸೊಪ್ಪಿಮಠ, ಚಂದ್ರಶೇಖರ ಕ್ಯಾತ್ನಟ್ಟಿ, ವೀರೇಶ ಕ್ಯಾತ್ನಟ್ಟಿ, ಮಹೇಶ ಕೊಟ್ಟೂರಮಠ, ಆದಯ್ಯ ಸ್ವಾಮಿ ಕ್ಯಾತ್ನಟ್ಟಿ ಪಂಚಾಕ್ಷರಯ್ಯ ಹಿರೇಮಠ, ಸಿದ್ದಯ್ಯಸ್ವಾಮಿ ಹಾಲಾಪೂರ, ಕರಿ ಬಸಯ್ಯ ಸ್ವಾಮಿ, ಶಾರದ ಸರಗ ಣಾಚಾರಿ ಸೇರಿದಂತೆ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-67224597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.