ಮೊಳಕಾಲ್ಮುರು: ಬಸವಾದಿ ಶರಣರ ಚಿಂತನೆಗಳನ್ನು ನಿರಂತರವಾಗಿ ಅನುಸರಿಸುವ ಅಗತ್ಯವಿದೆ ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಮಠದಲ್ಲಿ ಈಚೆಗೆ ನಡೆದ 95ನೇ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.

ಬುದ್ಧ, ಬಸವ, ಅಂಬೇಡ್ಕರ್ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಇವುಗಳ ಬಗ್ಗೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿದ್ದಯ್ಯನಕೋಟೆ ಶಾಖಾಮಠ 28 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಪ್ರತಿ ಹುಣ್ಣಿಮೆ ದಿನದಂದು ನಾಡಿನ ಅನುಭವಿ ಶರಣರನ್ನು ಕರೆಸಿ ಶರಣರ ತತ್ವಗಳ ಬಗ್ಗೆ ಉಪನ್ಯಾಸ ನೀಡುವ ಕೆಲಸವನ್ನು ಮಠವು ಮಾಡಿಕೊಂಡು ಬರುತ್ತಿದೆ. ಪ್ರತಿ ಕಾರ್ಯಕ್ರಮಕ್ಕೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಠದ ಬಸವಲಿಂಗ ಸ್ವಾಮೀಜಿ ತಿಳಿಸಿದರು.

ಜಾತ್ರಾ ಸಮಿತಿ ಅಧ್ಯಕ್ಷ ಭೋಗೇಶ್ ಗೌಡ, ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಕೆ.ಪಿ. ಪಂಪಾಪತಿ, ನಾಗೇಂದ್ರಪ್ಪ ಇದ್ದರು.

ಸಂಗೀತ ಶಿಕ್ಷಕ ಕೆ.ಒ. ಶಿವಣ್ಣ ನೇತೃತ್ವದಲ್ಲಿ ವಚನ ಗಾಯನ ಕಾರ್ಯಕ್ರಮ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-44-1900774573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.