ಮುದ್ದೇಬಿಹಾಳ: ಶರಣ ಮೇದಾರ ಕೇತಯ್ಯನವರು ಬಿದಿರಿನ ಬುಟ್ಟಿ, ಮರಗಳನ್ನು ಹೆಣೆದು ಮಾರಿ ಬಂದ ಹಣದಲ್ಲಿ ಜಂಗಮರಿಗೆ ದಾಸೋಹಗೈದು ಬಳಿಕ ತಾವು ಪ್ರಸಾದ ಸ್ವೀಕರಿಸುತ್ತಿದ್ದರು. ಅವರ ಕಾಯಕ ಜೀವನ ಎಲ್ಲರಿಗೂ ಆದರ್ಶಪ್ರಾಯವಾದದ್ದು ಎಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಮಹಾದೇವಿ ವಾಲಿ ಹೇಳಿದರು.

ಅವರು ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಕಾಶಿಬಾಯಿ ಎಸ್ ರಾಂಪೂರ ಅವರ ಮನೆಯಲ್ಲಿ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ ಮತ್ತು ಯುವ ಘಟಕದಿಂದ ಹಮ್ಮಿಕೊಂಡಿದ್ದ ಶರಣ ಬೆಳಗು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದರು. 12 ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಾಗಿದ್ದ ಕೇತಯ್ಯನವರು ಕಾಯಕ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮಾಡಿದ್ದವರು ಎಂದರು.

ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಕಾಶೀಬಾಯಿ ಶಿವಯೋಗಪ್ಪ ರಾಂಪೂರ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅಶೋಕ ಮಣಿ, ಬಿ.ವಿ.ಕೋರಿ, ಬಾಪುಗೌಡ ಪಾಟೀಲ, ಬಸವರಾಜ ಲಿಂಗದಳ್ಳಿ, ಶಿವಯೋಗೆಪ್ಪ ರಾಂಪೂರ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-910754794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.