ನರೇಗಲ್: ‘ಮಹಾಮಾನವತಾವಾದಿ ಬಸವಣ್ಣನವರು ಬೋಧಿಸಿದ ಕಾಯಕವೇ ಕೈಲಾಸ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳದಿದ್ದರೆ ಬದುಕು ದುಸ್ತರವಾಗುತ್ತದೆ’ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ಧಡೇಸೂರಮಠ ಹೇಳಿದರು.

ಪಟ್ಟಣದ ಅನ್ನದಾನೇಶ್ವರ ಶಿವಾನುಭವ ಮಂಟಪದಲ್ಲಿ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠ, ಅಕ್ಷರ ಭಾರತ ಪ್ರತಿಷ್ಠಾನ ಗದಗ ಹಾಗೂ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ವತಿಯಿಂದ ಈಚೆಗೆ ನಡೆದ 72ನೇ ಶಿವಾನುಭವ ಗೋಷ್ಠಿಯಲ್ಲಿ ಮಾತನಾಡಿದರು.

‘ಬಸವಣ್ಣನವರು ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದವರು. ಅನುಭವ ಮಂಟಪ ಸ್ಥಾಪಿಸಿ ಸಂಸತ್ತಿನ ಕಲ್ಪನೆ ನೀಡಿದವರು. ಬಸವಣ್ಣನವರು ತತ್ವಾದರ್ಶ ಇಂದಿಗೂ ಪ್ರಸ್ತುತ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಸಂಗಮೇಶ ಹೂಲಗೇರಿ ಮಾತನಾಡಿದರು. ಸಾವಯವ ಕೃಷಿಕ ವೀರೇಶ ನೇಗಲಿ, ಕಲ್ಲಯ್ಯ ಹಿರೇಮಠ, ಎಫ್. ಎನ್. ಹುಡೇದ, ಸಂಗಯ್ಯ ಪ್ರಭುಸ್ವಾಮಿಮಠ, ಬಿ.ಟಿ. ತಾಳಿ, ಎಚ್.ಎಂ. ಹಾದಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-23-1863271404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.