ನವಲಗುಂದ: ‘ಸಮಾಜದ ಎಲ್ಲ ರಂಗಗಳಲ್ಲಿ ಹೆಚ್ಚುತ್ತಿರುವ ಸಂಘರ್ಷ ಕೊನೆಯಾಗಿ ಶಾಂತಿ ಸಾಮರಸ್ಯ ಮೂಡಿಸುವ ಕೆಲಸ ಮಠಗಳಿಂದ ನಡೆಯಬೇಕು. ಒಡೆದ ಮನಸ್ಸುಗಳನ್ನು ಬೆಸೆಯುವುದೇ ಧರ್ಮದ ನಿಜವಾದ ಗುರಿ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸ್ಥಳೀಯ ಪಂಚಗೃಹ ಹಿರೇಮಠದ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ಬುಧವಾರ ನಡೆದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

‘ವಿಪತ್ತಿನ ಕಾಲದಲ್ಲೂ ಧರ್ಮವನ್ನು ಬಿಡಲಾರದವನು ನಿಜವಾದ ಧರ್ಮಾತ್ಮ. ನದಿ ಸಮುದ್ರಗಳನ್ನು ಸೇತುವೆ ಮೂಲಕ, ಗುಡ್ಡ ಬೆಟ್ಟಗಳನ್ನು ಸುರಂಗ ನಿರ್ಮಿಸಿ ದಾಟಬಹುದು. ಆದರೆ ಮನದ ಮಧ್ಯೆ ನಿರ್ಮಾಣಗೊಂಡ ಸ್ವಾರ್ಥದ ಗೋಡೆಗಳನ್ನು ದಾಟುವುದು ಕಷ್ಟ. ಗಾಢಾಂಧಕಾರದಲ್ಲಿ ಮುಳುಗಿದ ಮಾನವರನ್ನು ಎಚ್ಚರಿಸಿ ಜಾಗೃತಿ ಉಂಟು ಮಾಡುವುದೇ ಧಾರ್ಮಿಕ ಕೇಂದ್ರಗಳ ಗುರಿ’ ಎಂದರು.

ಉಜ್ಜಯಿನಿ ಸಿದ್ಧಲಿಂಗ ಶ್ರೀ ಮಾತನಾಡಿ, ‘ಮಾನವೀಯ ಸಂಬಂಧ ಗಳನ್ನು ಸದೃಢಗೊಳಿಸಲು ಆಯಾ ಕಾಲಘಟ್ಟಗಳಲ್ಲಿ ಆಚಾರ್ಯರು ಋಷಿಮುನಿಗಳು ಸಂತ ಮಹಾಂತರು ಅವತರಿಸಿ ಬಾಳಿಗೆ ಬೆಳಕು ತೋರಿಸಿದ್ದಾರೆ’ ಎಂದು ಹೇಳಿದರು.

ನೂತನ ಶ್ರೀಗಳ ಸಂದೇಶ: ನವಲಗುಂದ ಪಂಚಗೃಹ ಹಿರೇಮಠದ ನೂತನ ಪೀಠಾಧಿಕಾರಿ ಇಮ್ಮಡಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ‘ಪೂರ್ವ ಜನ್ಮದ ಸುಕೃತ ಮತ್ತು ಸಿದ್ದೇಶ್ವರ ಶಿವಾಚಾರ್ಯರ ಆಶೀರ್ವಾದದಿಂದ ಶ್ರೀ ಮಠದ ಪಟ್ಟಾಧ್ಯಕ್ಷನಾಗಿರುವೆ. ವೀರಶೈವ ಧರ್ಮ ಪರಂಪರೆಯ ಆದರ್ಶ ಮೌಲ್ಯಗಳ ಸಂರಕ್ಷಣೆ-ಗುರುಸ್ಥಲದ ಮಹತ್ವವನ್ನು ಅರಿತು ಭಕ್ತ ಸಂಕುಲಕ್ಕೆ ಮಾರ್ಗದರ್ಶನ ಮಾಡುವೆ’ ಎಂದರು.

ಶ್ರೀಶೈಲ ಚನ್ನಸಿದ್ಧರಾಮಪಂಡಿತಾರಾಧ್ಯ ಶ್ರೀ, ಕಾಶೀ ಪೀಠದಚಂದ್ರಶೇಖರ ಶ್ರೀ, ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು. ಪಂಚಗೃಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-24-1847754266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.