ಬಾಗೂರು(ನುಗ್ಗೇಹಳ್ಳಿ ): ಹೋಬಳಿಯ ನವಿಲೆ ಗ್ರಾಮದ ನಾಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವದ ನಿಮಿತ್ತ ದೇವರಿಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜೆಗಳು ನೆರವೇರಿದವು.

ರಥೋತ್ಸವಕ್ಕೆ ಬೆಂಗಳೂರು, ತಿಪಟೂರು, ಚನ್ನರಾಯಪಟ್ಟಣ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಬಂದು ದೇವರ ದರ್ಶನ ಪಡೆದರು. ಹೂವಿನ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಮಹಾಮಂಗಳಾರತಿ ನೆರವೇರಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ರಥಕ್ಕೆ ಹಣ್ಣು, ದವನ ಸಮರ್ಪಿಸಿ ಪೂಜೆ ಸಲ್ಲಿಸಿದರು.

ಶಾಸಕ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ.ಸಿ. ಆನಂದ್ ಕುಮಾರ್, ಡಿವೈಎಸ್ಪಿ ಕುಮಾರ್, ತಹಶೀಲ್ದಾರ್ ಶಂಕರಪ್ಪ ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬ್ರಹ್ಮರಥೋತ್ಸವ ಅಂಗವಾಗಿ ಏಪ್ರಿಲ್ 1ರವರೆಗೆ ವಿಶೇಷ ಪೂಜೆ, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಬ್ರಹ್ಮರಥೋತ್ಸವ ಅಂಗವಾಗಿ ನಂದಿದ್ವಜ ಕುಣಿತ ಭಕ್ತರ ಗಮನ ಸೆಳೆಯಿತು. ರಥೋತ್ಸವಕ್ಕೂ ಮುನ್ನ ನಂದಿ ಧ್ಚಜ ಕುಣಿತದೊಂದಿಗೆ ದೇವರ ಉತ್ಸವ ನಡೆಸಲಾಯಿತು. ರಥೋತ್ಸವದ ಅಂಗವಾಗಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಪಿಎಸ್ಐ ಭರತ್ ರೆಡ್ಡಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಪರಮೇಶ್, ತಾಲೂಕು ಅರ್ಚಕರ ಸಂಘದ ಅಧ್ಯಕ್ಷ ಶ್ರೀಧರ್ ಮೂರ್ತಿ, ನವಿಲೆ ನಾಗೇಶ್ವರ ಸ್ವಾಮಿ ನೀರು ಬಳಕೆದಾರರ ಸಂಘದ ಅಧ್ಯಕ್ಷ ಇಟ್ಟಿಗೆ ನಾಗರಾಜ್, ರಥ ನಿರ್ಮಾಣ ಸಮಿತಿ ಅಧ್ಯಕ್ಷ ಸದಾಶಿವಯ್ಯ, ಕಾರ್ಯದರ್ಶಿ ಜಯದೇವಪ್ಪ, ಖಜಾಂಚಿ ಕುಮಾರಸ್ವಾಮಿ, ಉಪ ತಹಶೀಲ್ದಾರ್ ಮೋಹನ್, ಕಂದಾಯ ಅಧಿಕಾರಿ ರಾಜು ಪ್ರೇಮ್ ಕುಮಾರ್, ಗ್ರಾಮದ ಪ್ರಮುಖರಾದ ಎನ್.ಎಲ್. ನಾಗರಾಜ್, ಎನ್. ಆರ್. ನಾಗೇಶ್, ನವೀನ್, ರವಿ, ಲೋಹಿತ್, ದಿನೇಶ್, ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-36-76863801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.