ಪಾಂಡವಪುರ: ಆಧುನಿಕ ಯುಗದ ಮನುಷ್ಯನಲ್ಲಿ ಆಡಂಬರಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಮಕ್ಕಳಿಗೆ ಜ್ಞಾನಾರ್ಜನೆಯ ಜೊತೆಗೆ ಸಂಸ್ಕಾರ ಕಲಿಸಬೇಕಿದೆ ಎಂದು ಬೇಬಿಬೆಟ್ಟದ ರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೀಶ್ವರ ಮಠದಲ್ಲಿ ಪ್ರಗತಿ ಸೇವಾ ಟ್ರಸ್ಟ್ ಹಾಗೂ ತಾಲ್ಲೂಕು ಚುಟುಕು ಪರಿಷತ್ ಆಶ್ರಯದಲ್ಲಿ ಶನಿವಾರ ನಡೆದ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮತ್ತು ಕವಿಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಟಿ.ವಿ, ಸಿನಿಮಾ, ಸಾಮಾಜಿಕ ಮಾಧ್ಯಮಗಳ ಹಾವಳಿಯಿಂದಾಗಿ ಸಂಸ್ಕೃತಿ ಹಾಗೂ ಸಾಹಿತ್ಯ ಮರೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಅಲ್ಲದೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದಲ್ಲಿ ವೃದ್ಧಾಶ್ರಮಗಳು ಕಡಿಮೆಯಾಗುವಂತೆ ಮಾಡಬೇಕಿದ ಎಂದರು.

ಪ್ರಗತಿ ಸೇವಾ ಟ್ರಸ್ಟ್ ಅಧ್ಯಕ್ಷ ನಾಗೇಶ್ ರಾಗಿಮುದ್ದನಹಳ್ಳಿ ಮಾತನಾಡಿ, ಸಮಾಜ ಸೇವೆ ನಿಸ್ವಾರ್ಥವಾಗಿ ಮಾಡಬೇಕು. ಪರಿಸರ ಪ್ರಜ್ಞೆ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಪ್ರತಿಯೊಬ್ಬರು ಮುಂದಾಗಬೇಕಿದೆ ಎಂದರು.

ನಿವೃತ್ತ ತಹಶೀಲ್ದಾರ್ ಎಸ್.ಸಂತೋಷ್, ಮಂಡ್ಯ ಡಿಡಿಪಿಐ ಜಿ.ಎ.ಲೋಕೇಶ್, ಬಿಸಿಎಂ ಇಲಾಖೆಯ ಕೆ.ಸಿ.ಮಂಜುಳಾ ಭದ್ರೇಗೌಡ, ಮುಖ್ಯ ಶಿಕ್ಷಕ ಆರ್.ಟಿ.ಬಸವರಾಜ್ ಅವರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ 20ಕ್ಕೂ ಹೆಚ್ಚು ಕವಿಗಳು ತಮ್ಮ ಚುಟುಕು ಕವನ ವಾಚಿಸಿದರು. ಲೋಕೇಶ್ ಎಂ.ಕಲ್ಕುಣಿ ಅವರ ‘ಚುಟುಕುಗಳ ಲೋಕ’ ಕೃತಿ ಬಿಡುಗಡೆ ಮಾಡಲಾಯಿತು.

ವಿಶ್ರಾಂತ ಪ್ರಾಂಶುಪಾಲ ಲೋಕೇಶ್, ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಆರ್.ಧನ್ಯಕುಮಾರ್, ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ, ಪ್ರಭುಸ್ವಾಮಿ, ಆರ್.ಎಂ.ನಾಗೇಶ್, ದೊಡ್ಡಬ್ಯಾಡರಹಳ್ಳಿ ಧನಂಜಯ, ಚಿಟ್ಟನಹಳ್ಳಿ ಮಂಜುನಾಥ್, ಅಶೋಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-40-508473018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.