ಪುತ್ತೂರು: ‘ಸಹಕಾರಿ ಧುರೀಣ ಸೀತಾರಾಮ ರೈ ಅವರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡು ಸಾಮಾಜಿಕ ಸೇವೆಯ ಮೂಲಕ ಸಾರ್ಥಕತೆಯನ್ನು ಕಂಡಿದ್ದು, ಅವರ ಬದುಕು ಸಾಧನಮಯ ವಾಗಿದೆ. ಅವರ ಕೌಟುಂಬಿಕ ಬದುಕು ಕೂಡ ಆದರ್ಶಮಯವಾಗಿದೆ’ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವರು ಶ್ಲಾಘಿಸಿದರು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಹಾಗೂ ಕಸ್ತೂರಿ ಕಲಾ ಎಸ್.ರೈ ಅವರ 50ನೇ ವಿವಾಹ ವಾರ್ಷಿಕೋತ್ಸವ ‘ಸೀತಾ.ಕಸ್ತೂರಿ ಕಲ್ಯಾಣ-50ರ ಸಂಭ್ರಮ' ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಒಡಿಯೂರು ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಸೀತಾರಾಮ ರೈ ಸವಣೂರು ಅವರು ಸಂಬಂಧವನ್ನು ವ್ಯವಹಾರ ಮಾಡದೆ ಸಂಸ್ಕಾರ ತುಂಬಿದ ಕಾರಣದಿಂದ ಈ ಹಂತಕ್ಕೆ ಬೆಳೆಯಲು ಸಾಧ್ಯವಾಗಿದೆ. ಅವರ ವೈವಾಹಿಕ ಜೀವನದ ಸುವರ್ಣ ಸಂಭ್ರಮವು ಸಮಾಜಕ್ಕೆ ಆದರ್ಶವಾಗಿದ್ದು, ಇದು ಅಮೃತ ಸಂಭ್ರಮಕ್ಕೆ ನಾಂದಿಯಾಗಲಿ ಎಂದರು.

ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ನ ಸಂಸ್ಥಾಪಕ ಡಾ.ಎ.ಜೆ.ಶೆಟ್ಟಿ ಮಾತನಾಡಿ, ಉದ್ಯಮ ರಂಗದ ಜತೆಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಸೀತಾರಾಮ ರೈ ಅವರ ಸಾಮಾಜಿಕ ಸೇವೆ ಮೂಲಕ ಉನ್ನತ ಸ್ಥಾನಕ್ಕೆ ಬೆಳೆದಿದ್ದಾರೆ. ಇನ್ನಷ್ಟು ವರ್ಷಗಳ ಕಾಲ ಆರೋಗ್ಯದಿಂದ ಕೂಡಿದ ಜೀವನ ನಡೆಸಿ, ಸಮಾಜಮುಖಿ ಕಾರ್ಯ ನಡೆಸುವಂತಾಗಲಿ ಎಂದರು.

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮಾತನಾಡಿ, ಹಂತ ಹಂತವಾಗಿ ಬೆಳೆದು ಬಂದಿರುವ ಸೀತಾರಾಮ ರೈ ಅವರು ವಿದ್ಯಾ ಕ್ಷೇತ್ರದ ಜತೆಗೆ ತನ್ನೂರಾದ ಸವಣೂರಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ತನ್ನ ಸಾಧನೆಗಳ ಮೂಲಕ ಜನಮನ್ನಣೆ ಗಳಿಸಿದ್ದಾರೆ. ತಮ್ಮ ವೈವಾಹಿಕ ಜೀವನದ ಸುವರ್ಣ ಸಂಭ್ರಮದಲ್ಲಿ ಸಾಧಕರನ್ನು ಗೌರವಿಸಿರುವುದು ಶ್ಲಾಘನೀಯ ಕಾರ್ಯ ಎಂದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು.

ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕಾವ್ಯ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಸ್ಥಾಪಕ ಭಾಗವತ ಪಟ್ಲ ಸತೀಶ್ ಶೆಟ್ಟಿ, ಕಂಬಳ ತೀರ್ಪುಗಾರ ಎಡ್ತೂರು ರಾಜೀವ ಶೆಟ್ಟಿ, ಚಲನಚಿತ್ರ ನಿರ್ದೇಶಕ ರವಿ ರೈ ಕಳಸ ಅವರನ್ನು ಸನ್ಮಾನಿಸಲಾಯಿತು.

ಕೆ.ಸೀತಾರಾಮ ರೈ ಕುಟುಂಬಸ್ಥರಾದ ರಶ್ಮಿ ಎ.ಶೆಟ್ಟಿ, ಅಶ್ವಿನ್ ಎಲ್.ಶೆಟ್ಟಿ, ಪಲ್ಲವಿ ಎಂ.ರೈ, ಮಹೇಶ್ ರೈ ಸವ ಣೂರು (ಅಮೆರಿಕ), ಅಶ್ವಿತಾ ಆರ್.ರೈ, ಡಾ.ರಾಜೇಶ್ ರೈ ಸವಣೂರು (ಇಂಗ್ಲೆಂಡ್) ಉಪಸ್ಥಿತರಿದ್ದರು.

ಕೆ.ಸೀತಾರಾಮ ರೈ ಸವಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ ಸನ್ಮಾನ ಪತ್ರ ವಾಚಿಸಿದರು. ಎನ್.ಜಯ ಪ್ರಕಾಶ್ ರೈ ಚೊಕ್ಕಾಡಿ ವಂದಿಸಿದರು. ಚಂದ್ರಶೇಖರ್ ಹಾಗೂ ಮಾಧವಿ ರೈ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-29-1659221169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.