ರಬಕವಿ ಬನಹಟ್ಟಿ: ‘ಅದ್ವೈತ ಸಿದ್ಧಾಂತದ ಪ್ರತಿಪಾದಕ ಶಂಕರಾಚಾರ್ಯರು ಸನಾತನ ಧರ್ಮವನ್ನು ಸಂರಕ್ಷಣೆ ಮಾಡುವ ಜೊತೆಗೆ ಧರ್ಮದ ಪುನರುತ್ಥಾನಕ್ಕಾಗಿ ಶ್ರಮಿಸಿದರು’ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು.

ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

‘ನಾಲ್ಕು ಪೀಠಗಳನ್ನು ಸ್ಥಾಪಿಸಿ, ಜಗತ್ತಿಗೆ ಮಾರ್ಗದರ್ಶನ ಮಾಡಿದ ಮಹಾನ್ ವ್ಯಕ್ತಿ ಶಕರಾಚಾರ್ಯರು. ಅವರು ಸ್ಥಾಪಿಸಿದ ಪೀಠವೊಂದು ಕರ್ನಾಟಕದ ಶೃಂಗೇರಿಯಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದರು.

‘ಭಾರತ ದೇಶವು ಸಂತರು, ಶರಣರು, ಮಹಾನ್ ವ್ಯಕ್ತಿಗಳು ಜನಿಸಿದ ಶ್ರೇಷ್ಠ ನಾಡು. ಮಹನೀಯರ ನಡೆ, ನುಡಿ ಮತ್ತು ಅವರು ಪ್ರತಿಪಾದಿಸಿದ ತತ್ವಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಿರಸ್ತೇದಾರ್ ರಾಜಶೇಖರ ಸಾತಿಹಾಳ, ಎಸ್.ಬಿ. ಕೂಗಾಟೆ, ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಹರ್ಷವರ್ಧನ ಪಟವರ್ಧನ, ಚೇತನ ಭಜಂತ್ರಿ, ಸದಾಶಿವ ಕುಂಬಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-19-190720470

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.