ರಾಂಪುರ: ಬಡವರು ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು ಎಂದು ದೇವರಾಜ ಪಾಟೀಲ ಹೇಳಿದರು.

ಸಮೀಪದ ಮುತ್ತತ್ತಿ ಗ್ರಾಮದಲ್ಲಿ ದಾಳಮ್ಮದೇವಿ ಹಾಗೂ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ನಿಮಿತ್ತ ಸ್ಥಳೀಯ ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮೀತಿ ಮಂಗಳವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಡವರು ಅಂತಸ್ತಿಕೆಗೆ ಮುಂದಾಗಿ ಸಾಲಮಾಡಿ ಮಕ್ಕಳ ಮದುವೆ ಮಾಡಿದರೆ ಅದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ. ಇದನ್ನು ಪ್ರತಿಯೊಬ್ಬರೂ ತಿಳಿದು ಸಂಘ-ಸಂಸ್ಥೆಗಳು, ಮಠ-ಮಾನ್ಯಗಳು ಹಮ್ಮಿಕೊಳ್ಳುವ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕು. ಸಾಮೂಹಿಕ ವಿವಾಹಗಳಲ್ಲಿ ಮದುವೆ ಆಗುವುದು ವಧು-ವರರ ಸೌಭಾಗ್ಯವೇ ಸರಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ರಾಜು ಮುದೇನೂರ, ಸಾಮೂಹಿಕ ವಿವಾಹಗಳು ಬಡವರ ಪಾಲಿಗೆ ವರದಾನವಾಗಿವೆ ಎಂದರು.

ಆಶೀರ್ವಚನ ನೀಡಿದ ಮುತ್ತತ್ತಿಯ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಸಾಮೂಹಿಕ ವಿವಾಹಗಳು ಕೇವಲ ಬಡವರ ಮದುವೆಗಳಲ್ಲ. ಇವು ಭಾಗ್ಯವಂತರ ಮದುವೆಗಳು ಎಂದು ಹೇಳಿ ನೂತನ ದಂಪತಿಗಳು ಅನ್ಯೋನ್ಯತೆಯಲ್ಲಿ ಜೀವನ ಸಾಗಿಸಬೇಕು ಎಂದು ಹೇಳಿದರು.

ಪ್ರಾಥಮಿಕ ಶಾಲಾ ಎಸ್.ಸಿ, ಎಸ್. ಟಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮಣ ಯಂಕಂಚಿ, ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ, ಸುರೇಶ ಕೊಣ್ಣೂರ ಮಾತನಾಡಿದರು.

ಶಿವಾನಂದ ಟವಳಿ, ಮಾದಾರ ಚೆನ್ನಯ್ಯ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಮಹಾದೇವ ಹರಿಜನ, ಸಂಗಣ್ಣ ಲೋಕಾಪುರ, ಸಿದ್ದು ಲೋಕಾಪುರ ವೇದಿಕೆಯಲ್ಲಿದ್ದರು. ಹರ್ಷಿತಾ ಪ್ರಾರ್ಥಿಸಿದರು. ಹನಮಂತ ಮುತ್ತತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಶುರಾಮ ಬಸವನಾಳ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-19-1139521127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.