ರೋಣ: ‘ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೇತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶೀರ್ವಾದದೊಂದಿಗೆ ಸಾಮೂಹಿಕ ವಿವಾಹವಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ’ ಎಂದು ಸಿದ್ಧವೀರ ಶಿವಾಚಾರ್ಯರು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೊತಬಾಳ ಗ್ರಾಮದಲ್ಲಿ ಅಡವಿ ಸಿದ್ಧೇಶ್ವರರ 71ನೇ ಪುಣ್ಯ ಸ್ಮರಣೋತ್ಸವ ಹಾಗೂ ರಾಜಶೇಖರ ಶಿವಯೋಗಿಗಳ 25ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ಒಂದು ವಿಭಿನ್ನ ಪರಂಪರೆ ಇದೆ. ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಬಹುದು. ಪ್ರತಿಯೊಬ್ಬರೂ ಈ ಬಗ್ಗೆ ಯೋಚಿಸಬೇಕಾದ ಅನಿವಾರ್ಯತೆ ಇದೆ’ ಎಂದರು.

ಅಡವಿ ಸಿದ್ಧೇಶ್ವರ ಮಠದ ಗಂಗಾಧರ ಸ್ವಾಮೀಜಿ ಮಾತನಾಡಿ, ‘ಉತ್ತರ ಕರ್ನಾಟಕದಲ್ಲಿ ಮೊದಲು ಸಾಮೂಹಿಕ ವಿವಾಹ ಕಾರ್ಯ ಹಮ್ಮಿಕೊಂಡ ಕೀರ್ತಿ ಶ್ರೀಮಠಕ್ಕೆ ಸಲ್ಲುತ್ತದೆ. ಹಿರಿಯ ಶ್ರೀಗಳ ಆಶಿರ್ವಾದ, ಭಕ್ತರ ಸಹಾಯ, ಸಹಕಾರದಿಂದ ಪ್ರತಿವರ್ಷ ಸಾಮೂಹಿಕ ವಿವಾಹಗಳು ನಡೆಯುತ್ತಿವೆ’ ಎಂದು ಹೇಳಿದರು.

ರೋಣ ಗುಲಗಂಜಿಮಠದ ಗುರುಪಾದ ಶ್ರೀಗಳು, ಕೊಟ್ಟೂರೇಶ್ವರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ, ಸಿದ್ಧಲಿಂಗ ಶಿವಾಚಾರ್ಯರು, ಶಿವಪೂಜ ಶಿವಾಚಾರ್ಯರು, ಗುರುಸಿದ್ಧೇಶ್ವರ ಸ್ವಾಮೀಜಿ, ಕೈಲಾಸಲಿಂಗ ಸ್ವಾಮೀಜಿ, ಶಿವಣ್ಣ ಪಲ್ಲೇದ, ಮಲ್ಲಣ್ಣ ಯಲಿಗಾರ, ಶೇಖಣ್ಣ ಯಲಿಗಾರ, ಶಂಕರಣ್ಣ ಸಂಕಣ್ಣವರ, ವೀರಣ್ಣ ಯಾಳಗಿ, ಮುತ್ತು ಅಸೂಟಿ, ಸಂಗಣ್ಣ ಮುದಗಲ್, ಮುತ್ತಣ್ಣ ಉಣಚಗೇರಿ, ಶೇಖಣ್ಣ ಕೋರಿ, ಸಿದ್ದು ಯಾಳಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-23-1544217150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.