ಸಾಲಿಗ್ರಾಮ: ‘ಮಹನೀಯರ ಜಯಂತಿ ಕಾರ್ಯಕ್ರಮಗಳು ಜಾತಿಗೆ ಮಾತ್ರ ಸೀಮಿತಗೊಳ್ಳದೆ ಸಮಾಜವೇ ಸ್ಮರಣೆ ಮಾಡುವಂತಹ ಕೆಲಸವಾಗಬೇಕು. ಆಗ ಮಾತ್ರ ಅವರ ತ್ಯಾಗಕ್ಕೆ ಗೌರವ ಸಲ್ಲಿಸಿದಂತೆ ಆಗುತ್ತದೆ’ ಎಂದು ಉದ್ಯಮಿ ಹರದನಹಳ್ಳಿ ವಿಜಯ್ ಹೇಳಿದರು.

ತಾಲ್ಲೂಕಿನ ಹರದನಹಳ್ಳಿಯಲ್ಲಿ ಆಯೋಜಿಸಿದ್ದ ದೇವರದಾಸಿಮಯ್ಯ ಜಯಂತಿ ಕಾರ್ಯಕ್ರಮ ಅಂಗವಾಗಿ ಭಾವಚಿತ್ರವಿರುವ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇಶದಲ್ಲಿ ಸಂಕಷ್ಟ ಎದುರಾದ ದಿನಗಳಲ್ಲಿ ಮಹನೀಯರು ಯಾವುದೇ ಜಾತಿ, ಧರ್ಮ ನೋಡದೆ ಜನರಿಗಾಗಿ ಶ್ರಮಿಸಿದರು. ಆದರೆ, ಈಗ ಮಹನೀಯರನ್ನು ಜಾತಿಗೆ ಸಿಮೀತ ಮಾಡಿರುವುದು ಬೇಸರದ ಸಂಗತಿ’ ಎಂದು ತಿಳಿಸಿದರು.

‘ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತರಲು ಶ್ರಮಿಸುವ ಅಗತ್ಯವಿದೆ’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಶೋಕ್, ಕಿಟ್ಟಿ, ಶಿಕ್ಷಕ ಕೃಷ್ಣಮೂರ್ತಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-38-2038023423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.