ಶಹಾಪುರ: ‘ದೇಶದ ಮಹಾನ ನಾಯಕರ ಜಯಂತ್ಯುತ್ಸದಂದು ಡಿ.ಜೆ ಮುಂದೆ ಕುಣಿದು ಕುಪ್ಪಳಿಸಿ ಸಂಭ್ರಮಿಸುವುದಕ್ಕಿಂತ ನಮ್ಮ ಮಕ್ಕಳು ಹಾಗೂ ಯುವಕರ ಕೈಗೆ ಪುಸ್ತಕ ನೀಡಿದರೆ ಜ್ಞಾನವೃದ್ಧಿಯಾಗುತ್ತದೆ. ಆವಾಗ ಅಂಬೇಡ್ಕರ್ ಜಯಂತ್ಯುತ್ಸವದ ಆಚರಣೆ ಸಾರ್ಥಕವಾಗುತ್ತದೆ’ ಎಂದು ಮೈಸೂರಿನ ಉರಿಲಿಂಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿ ಸಮುದಾಯಗಳಲ್ಲಿ ಜಾತಿ ಪ್ರೇಮ ತಾಂಡವಾಡುತ್ತಿದೆ. ಅಂಬೇಡ್ಕರ್ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತ ಮಾಡುತ್ತಿರುವುದು ಮನುವಾದದ ವ್ಯವಸ್ಥಿತ ತಂತ್ರವಾಗಿದೆ. ಶೋಷಿತ ಸಂವಿಧಾನ ಸಮುದಾಯದ ಆತ್ಮವಾಗಿದ್ದು, ನಾವ್ಯಾರು ಅದನ್ನು ಮರೆಯುವಂತಿಲ್ಲ. ಇಂತಹ ದುಷ್ಟಶಕ್ತಿಗಳ ವಿರುದ್ಧ ನಾವೆಲ್ಲರೂ ಸಂಘಟಿತರಾಗಿ ಹೋರಾಡುವುದು ಅಗತ್ಯವಾಗಿದೆ’ ಎಂದರು.

ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಮಾಜಿ ಶಾಸಕ ಗುರು ಪಾಟೀಲ ಶಿರವಾಳ, ಬಿಜೆಪಿ ಹಿರಿಯ ಮುಖಂಡ ಅಮೀನರಡ್ಡಿ ಪಾಟೀಲ ಯಾಳಗಿ, ಶಿವಪುತ್ರ ಜವಳಿ, ಪ್ರೊ.ಸುರೇಶ ಗೌತಮ, ಅಯ್ಯಣ್ಣ ಕನ್ಯಾಕೊಳ್ಳುರ, ಗುತ್ತಿಗೆದಾರ ದೇವೇಂದ್ರಪ್ಪ ಗೌಡಗೇರಿ, ಗೌಡಪ್ಪಗೌಡ ಆಲ್ದಾಳ, ಚಂದ್ರಶೇಖರ ಜಾಧವ, ಶಿವಮಹಾಂತ ಚಂದಾಪುರ, ಮಲ್ಲಿಕಾರ್ಜುನ ಪೂಜಾರಿ, ಶ್ರೀಶೈಲ ಹೊಸಮನಿ, ನೀಲಕಂಠ ಬಡಿಗೇರ, ಹೊನ್ನಪ್ಪ ಗಂಗನಾಳ, ನಾಗಣ್ಣ ಬಡಿಗೇರ, ಭೀಮರಾಯ ಹೊಸಮನಿ, ಅಶೋಕ ತಳವಾರ, ಶಿವಕುಮಾರ ತಳವಾರ, ಮಹಾದೇವ ದಿಗ್ಗಿ, ಬಾಬುರಾವ ಬೂತಾಳೆ, ರವೀಂದ್ರನಾಥ ಹೊಸಮನಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-30-1908105166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.