ಶಿವಮೊಗ್ಗ: ಸೊರಬ ತಾಲ್ಲೂಕು ಬ್ರಾಹ್ಮಣ ಸಮಾಜದಿಂದ ಈಚೆಗೆ ಅಲ್ಲಿನ ಗುರುಭವನದಲ್ಲಿ ವಾರ್ಷಿಕ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ತಾಲ್ಲೂಕಿನ ವಿಪ್ರ ಕುಟುಂಬಗಳ ಸಮಗ್ರ ಮಾಹಿತಿ ಒದಗಿಸುವ ವಿಶೇಷ ‘ಆ್ಯಪ್’ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಬ್ರಾಹ್ಮಣ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ನಟರಾಜ್ ಭಾಗವತ್ ಮಾತನಾಡಿ, ‘ಸಮಾಜದ ಪ್ರತಿಯೊಬ್ಬರೂ ಸಮನ್ವಯ ಮನೋಭಾವದಿಂದ ಸಂಘಟಿತರಾಗಬೇಕು. ಸಮಾಜದ ಸರ್ವತೋಮುಖ ಏಳಿಗೆಗಾಗಿ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ ಜಿಲ್ಲಾ ಪ್ರತಿನಿಧಿ ರಘುರಾಮ್ ಅವರು ಸರ್ಕಾರದಿಂದ ಸಮುದಾಯಕ್ಕೆ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಹಕಾರ ಕ್ಷೇತ್ರ ಮತ್ತು ಸಮಾಜ ಸೇವೆಗಾಗಿ ಸೊರಬದ ಎಚ್.ಎಸ್. ಮಂಜಪ್ಪ, ಎಂ.ಕೆ. ಭಟ್, ಧಾರ್ಮಿಕ ಮತ್ತು ಪೌರೋಹಿತ್ಯ ಕಾರ್ಯಕ್ಕಾಗಿ ವಿದ್ವಾನ್ ನಾರಾಯಣ ಭಟ್, ಬರಹ ಮತ್ತು ಪತ್ರಿಕಾ ಕ್ಷೇತ್ರದ ಸೇವೆಗಾಗಿ ಬಿ.ಎನ್.ಸಿ.ರಾವ್ ಬರಿಗೆ, ಸಮಾಜಸೇವೆಗೆ ಆನವಟ್ಟಿಯ ಶೀಲಾ ಡೋಂಗ್ರೆ ಅವರನ್ನು ಗೌರವಿಸಲಾಯಿತು.

ಸನ್ಮಾನಿತರ ಪರ ಮಾತನಾಡಿದ ಎಂ.ಕೆ. ಭಟ್, ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಾಹ್ಮಣ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ತಲಕಾಲುಕೊಪ್ಪದ ಬಿ.ಎಸ್. ಪ್ರಕಾಶ್ ವಹಿಸಿದ್ದರು. ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಮಾಲತೇಶ್, ಮಾಜಿ ಅಧ್ಯಕ್ಷ ಕಟ್ಟಿನಕೆರೆ ಸೀತಾರಾಮ್, ಪ್ರಧಾನ ಕಾರ್ಯದರ್ಶಿ ಕಾಳಿಂಗರಾಜ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-42-1892739895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.