ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ ಜಿಲ್ಲೆಯಾದ್ಯಂತ ಶಿವರಾತ್ರಿ ಸಂಭ್ರಮ

ಈಶ್ವರನ ಧ್ಯಾನದಲ್ಲಿ ಮುಳುಗೆದ್ದ ಭಕ್ತವೃಂದ, ವಿಶೇಷ ಪೂಜೆ, ಪ್ರಾರ್ಥನೆ, ಜಾಗರಣೆ
Last Updated 22 ಫೆಬ್ರುವರಿ 2020, 10:23 IST
ಅಕ್ಷರ ಗಾತ್ರ

ಚಾಮರಾಜನಗರ: ಮಹಾಶಿವರಾತ್ರಿಯ ಅಂಗವಾಗಿ ನಗರದ ಐತಿಹಾಸಿಕ ಚಾಮರಾಜೇಶ್ವರ ದೇವಸ್ಥಾನ,ಶ್ರೀಕಂಠೇಶ್ವರದೇವಸ್ಥಾನ, ವೀರಭದ್ರೇಶ್ವರ ದೇವಸ್ಥಾನ, ಯಡಬೆಟ್ಟ ಮಹದೇಶ್ವರ, ಹರದನಹಳ್ಳಿಯ ದಿವ್ಯಲಿಂಗೇಶ್ವರ ದೇವಸ್ಥಾನ, ಯಳಂದೂರಿನ ಗೌರೀಶ್ವರ, ಕಾಳಿಕಾಂಬ ಕಮಠೇಶ್ವರ ದೇವಸ್ಥಾನ ಗಡಿಭಾಗದ ಕೊಂಗಳ್ಳಿ ಶ್ರೀಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ಶಿವ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಪೂಜೆ, ಹೋಮ– ಹವನ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

ಗ್ರಾಮೀಣ ಭಾಗದ ಕೆಲ ಮಠಗಳು ಹಾಗೂಶಿವನ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ಹಾಗೂ ಜಾಗರಣೆ ಮಾಡಲಾಯಿತು.

ಜಾಗರಣೆ: ಮಹಾಶಿವರಾತ್ರಿ ಆಚರಣೆಅಂಗವಾಗಿಶುಕ್ರವಾರನಗರದಚಾಮರಾಜೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ಶಿವನ ಎಲ್ಲ ದೇವಸ್ಥಾನಗಳಲ್ಲಿಶಿವಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಜಾಗರಣೆ ಮಾಡಿದರು.

ವಿಶೇಷ ಪೂಜೆ, ಜಾತ್ರೆ: ಭಕ್ತರು ಶಿವನಿಗೆ ನಾಮಮಂತ್ರ ಸಹಿತಬಿಲ್ವಪತ್ರೆಗಳನ್ನು ಅರ್ಪಿಸಿದರು. ಮೂಲಮಂತ್ರ ಜಪಿಸಿದರು. ದೇವಸ್ಥಾನಗಳನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು.ಮುಂಜಾನೆ ಶಿವನಿಗೆ ವಿಶೇಷ ಅಭಿಷೇಕ ನೆರವೇರಿತು.ಬಳಿಕ ರುದ್ರಾಭಿಷೇಕ, ಹೋಮ ಹವನ ನಡೆದವು. ಶಿವಲಿಂಗಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದೇವಾಲಯಗಳಲ್ಲಿ ಭಕ್ತರ ಸಂದಣಿ ಹೆಚ್ಚಿತ್ತು.

ಕಮಠೇಶ್ವರಸ್ವಾಮಿ: ನಗರದ ಕಾಳಿಕಾಂಬ ಸಮೇತ ಕಮಠೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿರುವ ಕಮಠೇಶ್ವರ ಸ್ವಾಮಿಗೆ ಬೆಳ್ಳಿಯ ಮುಖವಾಡ ಧರಿಸಿ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಬೆಳಗಿನಿಂದಲೇ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಶಿವರಾತ್ರಿ ಜಾಗರಣೆಗಾಗಿ ದೇವಸ್ಥಾನದ ಅವರಣದಲ್ಲಿ ಶಿವಲಿಂಗದ ಮಾದರಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಯಿತು.

ಈ ಶಿವಲಿಂಗ ಭಕ್ತರ ಆಕರ್ಷಣೆಯ ಕೇಂದ್ರವಾಗಿತ್ತು. ದೇವಸ್ಥಾನದ ಮುಂಭಾಗದಲ್ಲಿರುವ ಈಶ್ವರನಿಗೆ ವಿಶೇಷವಾಗಿ ಹೂವಿನ ಮತ್ತು ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಶಿವರಾತ್ರಿ ಜಾಗರಣೆಗಾಗಿ ಬರುವ ಭಕ್ತರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಸಂಜೆ6 ಗಂಟೆಗೆ ಕೈಲಾಸ ವಾಸಿ ಶಿವನಿಗೆ ಪ್ರಥಮ ಪೂಜೆ ಆರಂಭಗೊಂಡು ಪ್ರತಿ ಮೂರು ಗಂಟೆಗೊಮ್ಮೆ ಪೂಜೆ, ಪಂಚಾಮೃತ ಅಭಿಷೇಕ ಸೇರಿದಂತೆವಿವಿಧಅಭಿಷೇಕಗಳು ಜರುಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT