ಶೃಂಗೇರಿ: ‘ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದ್ದು, ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಜೀವ ಉಳಿಸುವಲ್ಲಿ ಅಮೂಲ್ಯ ಕೊಡುಗೆ ನೀಡುತ್ತದೆ’ ಎಂದು ಶೃಂಗೇರಿ ಶಾರದಾ ಪೀಠದ ಗುರುಗಳ ಆಪ್ತ ಸಹಾಯಕರಾದ ಕೃಷ್ಣಮೂರ್ತಿ ಭಟ್ ಹೇಳಿದರು.

ಶೃಂಗೇರಿ ಶಾರದಾ ಕೃಪಾದ ಸಭಾಂಗಣದಲ್ಲಿ ಶಾರದಾ ಪೀಠದ ಗುರುಗಳ 76ನೇ ವರ್ಧಂತಿ ಮಹೋತ್ಸವದ ಪ್ರಯುಕ್ತ ರೋಟರಿ ಕ್ಲಬ್, ಇನ್ನರ್ವೀಲ್ ಸಂಸ್ಥೆ, ಕಾರ್ಮಿಕ ಮಿತ್ರ ಬಳಗ ಹಾಗೂ ರಕ್ತದಾನಿಗಳ ಬಳಗ ಮುಂತಾದ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿಸ್ವಾರ್ಥ ಸೇವೆ ಸಣ್ಣದಾಗಲಿ, ದೊಡ್ಡದಾಗಲಿ ಆತ್ಮಸಂತೃಪ್ತಿ ನೀಡುತ್ತದೆ. ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ರಕ್ತದಾನದ ಮೂಲಕ ಮತ್ತೊಬ್ಬರ ಜೀವ ಉಳಿಸುವುದು ಅತ್ಯಂತ ಅಮೂಲ್ಯ ಕಾರ್ಯ. ಇಂತಹ ಶ್ರೇಷ್ಠ ಸತ್ಕಾರ್ಯಗಳಲ್ಲಿ ತೊಡಗುವವರಿಗೆ ಶಾರದೆ ಹಾಗೂ ಉಭಯ ಗುರುಗಳ ಅನುಗ್ರಹ ಲಭಿಸಲಿ ಎಂದು ಹಾರೈಸಿದರು.

ಹಲವು ಬಾರಿ ರಕ್ತದಾನ ಮಾಡಿದ ಬಿ.ಶಿವಶಂಕರ್, ಮಿಥುನ್, ರಮೇಶ್ ಮೊಗವೀರ, ಕೆ.ಪಿ. ಶ್ರೀನಿವಾಸ್ ಮೂರ್ತಿ, ಮಹೇಂದ್ರ, ಎಂ.ರವಿ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ರೋಟರಿ ಅಧ್ಯಕ್ಷ ಅಂಬಲಮನೆ ಸುಬ್ರಹ್ಮಣ್ಯ, ಇನ್ನರ್ವೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ, ಕಾರ್ಮಿಕ ಮಿತ್ರ ಬಳಗದ ಅಧ್ಯಕ್ಷ ಶ್ರೀಕಾಂತ್ ಶೂನ್ಯ, ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರಾದ ಡಾ.ವಿಜಯ್ ಭಾಸ್ಕರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-126-1114091486

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.