ಸಿರುಗುಪ್ಪ: ‘12ನೇ ಶತಮಾನದಲ್ಲಿ ಬಸವಾದಿ ಶರಣರು, ಕಲ್ಯಾಣದಲ್ಲಿ ಸಮಾನತೆಯ ಸಂದೇಶ ಸಾರಿದರು. ಮಹಿಳೆಯರಿಗೆ ಆದ್ಯತೆ ನೀಡುವ ಮೂಲಕ ಸಮಾಜದಲ್ಲಿ ಸಮತೋಲನ ಸ್ಥಾಪಿಸಿದರು’ ಎಂದು ಹಾಲ್ವಿ ಚರಣಗಿರಿ ಸಂಸ್ಥಾನ ಮಠದ ಅಭಿನವ ಮಹಾಂತ ಸ್ವಾಮಿ ಹೇಳಿದರು.

ನಗರದ ಶ್ರೀಶೈಲ ಪೀಠದ ಶಿವಶಕ್ತಿ ಸಾಂಸ್ಕೃತಿಕ ಭವನದಲ್ಲಿ ಬಸವ ಜಯಂತಿ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಬಸವ ಸಂದೇಶ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬಸವೇಶ್ವರ ಜಯಂತಿ ಅಂಗವಾಗಿ ಆಧ್ಯಾತ್ಮಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಶ್ಲಾಘನೀಯವಾಗಿದೆ’ ಎಂದರು.

ಬೂದುಗುಂಪಾ ಕೊಟ್ಟೂರು ಸ್ವಾಮಿ ಶಾಖಾ ಮಠದ ಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ‘ಬಸವಣ್ಣನವರ ವಚನಗಳು ಮಾನವ ಕುಲಕ್ಕೆ ದಿಕ್ಕು ತೋರಿಸುತ್ತವೆ. ಅವುಗಳನ್ನು ಆಲಿಸಿ, ಪಾಲಿಸುವುದರಿಂದ ಉತ್ತಮ ಬದುಕು ಪ್ರಾಪ್ತವಾಗುತ್ತದೆ. ಯುವಜನತೆಗೆ ಪ್ರವಚನ ಕಾರ್ಯಕ್ರಮಗಳು ಅಗತ್ಯವಾಗಿದ್ದು, ಬಸವ ತತ್ವ ಅಳವಡಿಸಿಕೊಂಡರೆ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯ’ ಎಂದು ತಿಳಿಸಿದರು.

ಗುರುಬಸವ ಮಹಾಮಠದ ಬಸವ ಭೂಷಣ ಸ್ವಾಮೀಜಿ, ಅಕ್ಕಿ ಗಿರಿಣಿ ಮಾಲೀಕರ ಸಂಘದ ಅಧ್ಯಕ್ಷ ಎನ್.ಜಿ. ಬಸವರಾಜಪ್ಪ, ನೇಹಾರಂಗ ಕಲಾತಂಡದ ಅಧ್ಯಕ್ಷ ಆರ್. ಸದಾಶಿವ, ವೀರಶೈವ ತರುಣ ಸಂಘದ ಅಧ್ಯಕ್ಷ ಸುಳವಾಯಿ ಮಲ್ಲಿಕಾರ್ಜುನ, ಕಾರ್ಯದರ್ಶಿ ಲಿಂಗನಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-2003968543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.