ಸೊರಬ: ‘ಜೀವನದಲ್ಲಿ ನಿತ್ಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿಕೊಂಡು ಮನಸ್ಸನ್ನು ವಿಕಾಸಗೊಳಿಸಿದಾಗ ಮಾತ್ರ ಆಧ್ಯಾತ್ಮಿಕ ಚಿಂತನೆಗಳಿಗೆ ಅರ್ಥ ಬರಲಿದೆ’ ಎಂದು ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ ಹೇಳಿದರು.

ಪಟ್ಟಣದ ಮುರುಘಾ ಮಠದಲ್ಲಿ ಬುದ್ಧ ಪೌರ್ಣಿಮೆ ಅಂಗವಾಗಿ ನಡೆದ 242ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಸಮಾಜಕ್ಕೆ ಮಾನವೀಯ ಮೌಲ್ಯಗಳ ವಿಚಾರಗಳನ್ನು ತಿಳಿಸುವುದೇ ಶಿವಾನುಭವದ ಉದ್ದೇಶ. ಜಗತ್ತಿನ ಕೌಟುಂಬಿಕ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸಾಕಷ್ಟು ಸಾಮಾಜಿಕ ಸುಧಾರಣೆಯ ಅವಶ್ಯಕತೆಯಿದೆ. ಆಧುನಿಕತೆಯ ಭರಾಟೆಯಲ್ಲಿ ಯುವಜನರ ಯೋಚನೆ–ಆಲೋಚನೆಗಳು ಭಿನ್ನವಾಗಿದ್ದು, ಮೂಲ ಸಂಸ್ಕಾರ, ಸಂಸ್ಕೃತಿಯನ್ನು ಮರೆತು ಸಾಗುತ್ತಿದ್ದಾರೆ’ ಎಂದರು.

‘ಯುವಜನಾಂಗಕ್ಕೆ ನಮ್ಮ ಪರಂಪರೆಯ ತತ್ವ, ಉದ್ದೇಶಗಳನ್ನು ಪರಿಚಯಿಸುವ ಅವಶ್ಯಕತೆ ಇದೆ. ಹೆತ್ತ ತಂದೆ ತಾಯಂದಿರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ವ್ಯವಸ್ಥೆ ದೂರವಾಗಬೇಕಿದೆ’ ಎಂದು ತಿಳಿಸಿದರು. ಅಕ್ಕನ ಬಳಗದ ಅಧ್ಯಕ್ಷೆ ರೇಖಾ ಜಗದೀಶ್, ಜಯಮಾಲ, ಚಂದ್ರಶೇಖರ್ ನಿಜಗುಣ, ಡಿ. ಶಿವಯೋಗಿ, ರಾಮಣ್ಣ ಭಜಂತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-1048903692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.