ಶ್ರೀರಂಗಪಟ್ಟಣ: ‘ಜಾತಿ, ಧರ್ಮ, ಮತ, ಪಂಥ, ಲಿಂಗ ತಾರತಮ್ಯ, ಬಡತನ, ಸಾಮಾಜಿಕ ಸಮಸ್ಯೆಗಳಿಗೆ ಗೌತಮ ಬುದ್ಧನ ಸಂದೇಶಗಳಲ್ಲಿ ಉತ್ತರ ಸಿಗಲಿದೆ’ ಎಂದು ಯಾಚೇನಹಳ್ಳಿಯ ವಿವೇಕಾನಂದ ಆಶ್ರಮದ ಮುಖ್ಯಸ್ಥ ನಾದಾನಂದನಾಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ನೇರಲಕೆರೆ ಗ್ರಾಮದ ಬುದ್ಧ ಮಂದಿರದಲ್ಲಿ ಶುಕ್ರವಾರ ಬುದ್ಧ ಭಾರತ ಫೌಂಡೇಶನ್ ಏರ್ಪಡಿಸಿದ್ದ ಬುದ್ಧ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಬುದ್ಧ ಮೂಢ ನಂಬಿಕೆಗಳನ್ನು ವಿರೋಧಿಸಿದ್ದಾನೆ. ವೈಜ್ಞಾನಿಕ ದೃಷ್ಟಿಕೋನ ಬೆಳೆಸಿಕೊಳ್ಳುವಂತೆ ತಿಳಿಸಿದ್ದಾನೆ. ಮನುಷ್ಯನ ಅತಿಯಾದ ಆಸೆ ನೆಮ್ಮದಿಗೆ ಭಂಗ ತರುತ್ತಿದೆ. ಶಾಂತಿ ಮತ್ತು ಸಹಬಾಳ್ವೆಗೆ ಸತ್ಯದ ಮಾರ್ಗದಲ್ಲಿ ಬದುಕುವುದು ಅನಿವಾರ್ಯವಾಗಿದೆ ’ ಎಂದರು.

ಎಲ್ಲರೊಳಗೊಂದಾಗು ಟ್ರಸ್ಟ್ ಅಧ್ಯಕ್ಷ ವಿನಯ್ಕುಮಾರ್ ಮಾತನಾಡಿ, ‘ ಒತ್ತಡ ರಹಿತ ಜೀವನ ನಡೆಸಬೇಕಾದರೆ ಬುದ್ಧನ ಅಷ್ಟಾಂಗ ಮಾರ್ಗಗಳನ್ನು ಅನುಸರಿಸಬೇಕು’ ಎಂದು ಹೇಳಿದರು.

ಬುದ್ಧ ಭಾರತ ಫೌಂಡೇಶನ್ ಅಧ್ಯಕ್ಷ ಜೆ. ರಾಮಯ್ಯ ಪ್ರಾಸ್ತಾವಿಕ ಮಾತುಗಳಾಡಿದರು. ತಾ.ಪಂ. ಮಾಜಿ ಸದಸ್ಯ ಎನ್.ಪಿ. ಸುರೇಶ್, ಆಶಾಜ್ಯೋತಿ ಬಿ., ಎಸ್.ಕೆ. ರಾಜುಗೌಡ, ಮೋಹನಕುಮಾರ್ ಬುದ್ಧನ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-40-1888037847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.