ತಾಳಿಕೋಟೆ: ‘12ನೇ ಶತಮಾನದಲ್ಲಿ ಬಸವಣ್ಣನವರ ಸಮ ಸಮಾಜ ನಿರ್ಮಾಣದ ಆಂದೋಲನದಲ್ಲಿ ತಮ್ಮ ಅಮೂಲ್ಯ ಕೊಡುಗೆಯನ್ನು ಕಾಯಕಯೋಗಿ ಸಿದ್ದರಾಮೇಶ್ವರರು ನೀಡಿದ್ದಾರೆ. ಅಂತಹ ಮಹಾನ್ ಶರಣನ ಅನುಯಾಯಿಗಳು ಯಾವುದೇ ರೀತಿಯ ಕೀಳರಿಮೆಗೆ ಒಳಗಾಗುವುದು ಬೇಡ’ ಎಂದು ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಭೋವಿ ವಡ್ಡರ ಸಮಾಜದ ವತಿಯಿಂದ ಹುಲಿಗೆಮ್ಮದೇವಿ ಮತ್ತು ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರ ನಡೆದ ಸಿದ್ದರಾಮೇಶ್ವರ ಭೋವಿ ವಡ್ಡರ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವ ಮುಖಂಡ ಭರತಗೌಡ ಪಾಟೀಲ (ನಡಹಳ್ಳಿ) ಮಾತನಾಡಿ, ‘ಸಮಾಜದ ಯುವಕರಲ್ಲಿ ಜಾಗೃತಿ ಬಂದಾಗ ಸಮಾಜದ ಸರ್ವಾಂಗೀಣ ಪ್ರಗತಿ ಸಾಧ್ಯವಾಗುತ್ತದೆ’ ಎಂದರು.

ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ದಲಿತ ಮುಖಂಡ ಜೈಭೀಮ ಮುತ್ತಗಿ ಮಾತನಾಡಿದರು. ಆನಂದಕುಮಾರ ಡಿ.ಕೆ. ಹುಣಸಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾಹಿತಿ ಬಸವರಾಜ ಗೊರಜಿ, ಶಿಕ್ಷಕ ಸಾಹೇಬಗೌಡ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು. ಕುಮಾರಿ ಸೃಷ್ಟಿ ಹಿರೇಮಠ ಭರತನಾಟ್ಯ ಪ್ರದರ್ಶಿಸಿದರು.

ಬಿಜೆಪಿ ಯುವ ಮುಖಂಡ ಹಣಮಂತ ನಾಯಕ (ಬಬ್ಲುಗೌಡ), ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮೆಹೆಬೂಬ ಕೆಂಭಾವಿ, ಭೋವಿ ಸಮಾಜದ ಅಧ್ಯಕ್ಷ ಹಣಮಂತ ಕಟ್ಟಿಮನಿ, ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ ದ್ಯಾವಪ್ಪ ಕೂಚಬಾಳ, ಅಧ್ಯಕ್ಷ ಶ್ರೀನಿವಾಸ್ ಕುಲಕರ್ಣಿ, ಕಾಂಗ್ರೆಸ್ ಯುವ ಮುಖಂಡ ಸಂಗನಗೌಡ ಅಸ್ಕಿ, ಪತ್ರಕರ್ತ ಪುಂಡಲೀಕ ಮುರಾಳ, ಪುರಸಭೆ ಮಾಜಿ ಸದಸ್ಯರಾದ ಅಕ್ಕಮಹಾದೇವಿ ಕಟ್ಟಿಮನಿ, ಪ್ರಕಾಶ ಹಜೇರಿ, ದಲಿತ ಯುವ ಮುಖಂಡ ನಾಗೇಶ ಕಟ್ಟಿಮನಿ, ವಕೀಲ ಕಾರ್ತಿಕ್ ಕಟ್ಟಿಮನಿ, ಮುಸ್ಲಿಂ ಬ್ಯಾಂಕ್ ನಿರ್ದೇಶಕ ಸಿಕಂದರಬಾಷಾ ಡೋಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-26-1944563765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.