ತಾವರೆಕೆರೆ (ಚನ್ನಗಿರಿ): ‘ಸಂತಸ ಮತ್ತು ಶಾಂತಿಯುತ ಬದುಕಿಗೆ ಆಧ್ಯಾತ್ಮದ ಅರಿವು ಅತ್ಯಗತ್ಯವಾಗಿದ್ದು, ಭೌತಿಕ ಆಸ್ತಿಗಿಂತ ಆಧ್ಯಾತ್ಮ ಸಂಪತ್ತು ಶ್ರೇಷ್ಠ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ತಾವರೆಕೆರೆ ಗ್ರಾಮದ ಶಿಲಾಮಠದಲ್ಲಿ ಗುರುವಾರ ನಡೆದ ಲಿಂಗೈಕ್ಯ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ 126ನೇ ಜನ್ಮ ದಿನೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

‘ಇತರರಿಗೂ ಒಳಿತನ್ನು ಬಯಸುವುದೇ ನಿಜವಾದ ಧರ್ಮ. ಒಳ್ಳೆಯ ಹೆಸರು ಹಣಕ್ಕಿಂತ ಹೆಚ್ಚು ಬೆಲೆ ಬಾಳುತ್ತದೆ. ಸುಳ್ಳಿಗೆ ಹಲವು ದಾರಿಗಳಿದ್ದರೂ ಸತ್ಯಕ್ಕೆ ಒಂದೇ ದಾರಿ. ವೀರಶೈವ ಧರ್ಮದಲ್ಲಿ ರೇಣುಕಾಚಾರ್ಯರು ಬೋಧಿಸಿದ ಮೌಲ್ಯಗಳು ಉಲ್ಲೇಖಾರ್ಹ. ಕೈಲಾಸಕ್ಕಿಂತ ಕಾಯಕ, ಧರ್ಮಕ್ಕಿಂತ ದಯೆ, ಅರಿವಿಗಿಂತ ಆಚಾರ, ಅಧಿಕಾರಕ್ಕಿಂತ ಅಭಿಮಾನ ಹಾಗೂ ಭೌತಿಕ ಆಸ್ತಿಗಿಂತ ಆರೋಗ್ಯ ಮುಖ್ಯ. ತಾವರೆಕೆರೆ ಶಿಲಾಮಠದ ಲಿಂಗೈಕ್ಯ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ತಪಸ್ವಿಗಳಾಗಿ ಸಮಾಜಕ್ಕೆ ದಿಕ್ಕು ತೋರಿದ ಮಹಾನೀಯರಾಗಿದ್ದರು’ ಎಂದರು.

ಸಿದ್ಧಲಿಂಗ ಶಿವಾಚಾರ್ಯರು ಸರಳ ಸಜ್ಜನಿಕೆಯ ಸಿದ್ಧಿ ಪುರುಷರಾಗಿದ್ದು ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸಿ ಅಗತ್ಯ ಸನ್ಮಾರ್ಗ ದರ್ಶನವನ್ನು ನೀಡುತ್ತಿದ್ದರು. ಮಠಮಾನ್ಯಗಳು ಸಮಾಜದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಎಡೆಯೂರು ಕ್ಷೇತ್ರದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಹಿರೇಮಠದ ರಾಚೋಟೇಶ್ವರ ಶ್ರೀ,ಅಭಿನವ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-43-574001959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.