ತುಮಕೂರು: ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಗೆ ಕೈಗೊಂಡ ವಿಚಾರಧಾರೆ ರಾಷ್ಟ್ರದ ಸಂವಿಧಾನದಲ್ಲಿ ಅಡಕವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಹೇಳಿದರು.

ನಗರದಲ್ಲಿ ಸೋಮವಾರ ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್, ವೀರಶೈವ ಲಿಂಗಾಯತ ಸಮಾಜದ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಬಸವೇಶ್ವರ ಜಯಂತಿ ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಸಾಮಾಜಿಕ ಅಸಮತೋಲನ ನಿವಾರಿಸಲು ಜಾತ್ಯತೀತ, ಸಮ ಸಮಾಜ ನಿರ್ಮಾಣ, ಸ್ತ್ರೀ ಸಂವೇದಿ ಧೋರಣೆಯಂತಹ ವಿಚಾರಧಾರೆಗಳನ್ನು ಬಸವಣ್ಣ ಪ್ರಸ್ತಾಪಿಸಿದ್ದರು. ಇವು ಈಗ ಸಂವಿಧಾನದಲ್ಲಿ ಅಡಕವಾಗಿವೆ. ಕಳಬೇಡ ಕೊಲಬೇಡ ವಚನವೂ ಸಂವಿಧಾನದ ಪೀಠಿಕೆ, ಮೂಲಭೂತ ತತ್ವಗಳಿದ್ದಂತಿದೆ ಎಂದರು.

ಅಖಿಲ ಭಾರತ ವೀರಶೈವ– ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ಪರಮೇಶ್, ‘ಅಸ್ಪೃಷ್ಯತೆ, ಲಿಂಗ ತಾರತಮ್ಯ ಸಾಮಾಜಿಕ ಪಿಡುಗುಗಳ ವಿರುದ್ಧ ಬಸವಣ್ಣನವರು ನಡೆಸಿದ ಸಾಮಾಜಿಕ ಕ್ರಾಂತಿ ಇಂದಿಗೂ ಪೂರ್ಣಗೊಂಡಿಲ್ಲ. ಯುವ ಪೀಳಿಗೆ ಬಸವಣ್ಣನವರ ಆಶಯ ಅರ್ಥ ಮಾಡಿಕೊಂಡು ನಡೆಯಬೇಕು’ ಎಂದು ತಿಳಿಸಿದರು.

ಉಪನ್ಯಾಸಕಿ ಶರಣೆ ಧ್ಯಾನ ಶಿವಬಸಪ್ಪ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ, ಮಹಾನಗರ ಪಾಲಿಕೆ ಉಪ ಆಯುಕ್ತೆ ಸುಪ್ರಿಯಾ ಬಣಕಾರ್, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಟಿ.ಸಿ.ಓಹಿಲೇಶ್ವರ್, ಜಿ.ಮಲ್ಲಿಕಾರ್ಜುನಯ್ಯ, ಎಂ.ಜಿ.ಸಿದ್ಧರಾಮಯ್ಯ, ಗಂಗಾ ಪರಮೇಶ್, ಶಿವಲಿಂಗಮ್ಮ, ಸಿದ್ಧಗಂಗಮ್ಮ, ರಂಜನ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-17-384094089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.