ತುಮಕೂರು: ಬಸವಣ್ಣನವರು ಸಾರಿದ ತತ್ವಗಳು ಜಾತ್ಯತೀತ, ಕಾಯಕ, ದಾಸೋಹ ಮತ್ತು ಸಮಾನತೆಯ ಆಧಾರದಲ್ಲಿವೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಅಭಿಪ್ರಾಯಪಟ್ಟರು.

ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಯಕವೇ ಕೈಲಾಸ ಎಂದು ಹೇಳಿ, ದುಡಿದದ್ದನ್ನು ಸಮಾಜದೊಂದಿಗೆ ಹಂಚಿಕೊಳ್ಳಬೇಕು ಎಂಬ ಆದರ್ಶ ಸಮಾಜದ ಪರಿಕಲ್ಪನೆ ಬಿತ್ತಿದ್ದರು. 12ನೇ ಶತಮಾನದಲ್ಲಿಯೇ ಮಹಿಳಾ ಸಬಲೀಕರಣದ ಬಗ್ಗೆ ಧ್ವನಿ ಎತ್ತಿದ್ದರು. ಎಲ್ಲರಿಗೂ ಸಮಾನ ಅವಕಾಶ, ವೇದಿಕೆ ಕಲ್ಪಿಸಿದ್ದರು ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ, ‘ಜಾತಿ ವೈಷಮ್ಯ ಬಿಟ್ಟು, ಸಮಾನತೆ ಸಾರಿದ ಬಸವಣ್ಣ ಅವರ ತತ್ವಗಳು ಎಲ್ಲ ಧರ್ಮಗಳಿಗೂ ಆದರ್ಶಪ್ರಾಯ’ ಎಂದರು.

ಶಿಕ್ಷಣ ತಜ್ಞ ಚನ್ನಪ್ಪ ಬಾರಿಗಿಡದ ಉಪನ್ಯಾಸ ನೀಡಿದರು. ಕೊಪ್ಪಲ್ ಸಿದ್ಧವೀರಯ್ಯ ಮತ್ತು ಪಾರ್ವತಮ್ಮ ಪ್ರತಿಷ್ಠಾನದಿಂದ ಕೊಪ್ಪಲ್ ನಾಗರಾಜು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿದರು. ಜೂನಿಯರ್ ಕಾಲೇಜಿನಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿಜೆಪಿಯಿಂದ ಪುರಸ್ಕಾರ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-18-1257231417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.