ಉಡುಪಿ: ಬಿಹಾರದಲ್ಲಿ ಜನಿಸಿದ ಮಹಾವೀರ ಅವರು 24ನೇ ತೀರ್ಥಂಕರರಾಗಿ ಲೋಕ ಕಲ್ಯಾಣಕ್ಕೆ ಮುಂದಾದರು. ಪಂಚ ತತ್ವದ ಅಡಿಯಲ್ಲಿ ಸಮಾಜವನ್ನು ಕಟ್ಟುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದರು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ್ ಮಿಲನ್ ಉಡುಪಿ ಸಹಯೋಗದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾವೀರ ನೀಡಿದ ಸಂದೇಶದಂತೆ ಸತ್ಯ ಮತ್ತು ಅಹಿಂಸೆಯ ಪಾಲನೆಯ ಮೂಲಕ ಸಾಮರಸ್ಯದ ಸಮಾಜವನ್ನು ಕಟ್ಟುವಂತಗಬೇಕು ಎಂದರು. ಇಂದಿನ ದಿನಗಳ ಅನೇಕ ಸಮಸ್ಯೆಗಳ ನಿವಾರಣೆಗಾಗಿ ದಾರ್ಶನಿಕರ ಚಿಂತನೆಗಳು ದಾರಿ ದೀಪ. ಪ್ರತಿಯೊಬ್ಬರು ಮಹನೀಯರ ಆದರ್ಶಗಳನ್ನು ಪಾಲಿಸುವಂತಾಗಬೇಕು ಎಂದು ತಿಳಿಸಿದರು.

ಜಗತ್ತಿಗೆ ಅಹಿಂಸೆ ಮತ್ತು ಶಾಂತಿಯ ಪರಮೋಚ್ಚ ಸಂದೇಶವನ್ನು ನೀಡಿದ ಭಗವಾನ್ ಮಹಾವೀರ ಅವರ ತತ್ವಗಳು ಇಂದಿನ ಸಂಘರ್ಷಮಯ ಕಾಲಘಟ್ಟದಲ್ಲಿ ವಿಶ್ವಕ್ಕೆ ಮಾದರಿಯಾಗಿವೆ ಎಂದರು.

ಶ್ವೇತಾ ಜೈನ್ ಅವರು ವಿಶೇಷ ಉಪನ್ಯಾಸ ನೀಡಿದರು. ರಶ್ಮಿ ಸಾಗರ್ ಜಿನ ಸ್ಮೃತಿ ಪ್ರಸ್ತುತ ಪಡಿಸಿದರು. ಯೋಗರಾಜ್ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜೈನ್ ಮಿಲನ್ ಅಧ್ಯಕ್ಷ ನಿತಿನ್ ಪಾಟೀಲ್, ಭಾರತೀಯ ಜೈನ್ ಮಿಲನ್ ಕಾರ್ಯದರ್ಶಿ ಪ್ರಸನ್ನ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿದರು. ರಾಮಾಂಜಿ ನಿರೂಪಿಸಿದರು. ನಿತಿನ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-28-519809769

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.