ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಗಾಂಧಿಪಾರ್ಕ್ ಬಳಿ ಪುನರ್ ನಿರ್ಮಿತ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಏ.29ರಿಂದ ಮೇ 3ರವರೆಗೆ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಪದ್ಮಾವತೀ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾರಣಕ್ಕೆ ಬಸದಿಯ ಹಳೆಯ ಕಟ್ಟಡವನ್ನು ತೆರವುಗೊಳಿಸಿದ್ದರಿಂದ ಬಸದಿಯ ಪುರೋಹಿತ ಮನೆತನವು ದಾನ ನೀಡಿದ ಭೂಮಿಯಲ್ಲಿ ಬಸದಿಯನ್ನು ಪುನರ್ ನಿರ್ಮಿಸಲಾಗಿದೆ. ಅಂದಾಜು ಸುಮಾರು ₹1.5 ಕೋಟಿ ವೆಚ್ಚದಲ್ಲಿ ಬಸದಿ, ಗೋಪುರ, ಆವರಣಗೋಡೆ, ಏಕಶಿಲಾ ಚತುರ್ಮುಖ ಮಾನಸ್ತಂಭ, ಬಾವಿಯನ್ನು ನಿರ್ಮಿಸಲಾಗಿದೆ. ಬಸದಿಯಲ್ಲಿ ಬಿಳಿ ಅಮೃತಶಿಲಾ ಕೆತ್ತನೆ, ಜೈನ ಪರಂಪರೆಯ ಇತಿಹಾಸ ಸಾರುವ ಆಕರ್ಷಕ ಕೆತ್ತನೆಗಳಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಸದಿಯ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ವೀರಸಾಗರ ಮುನಿ ಮಹಾರಾಜರು ಮಂಗಲ ಪ್ರವಚನ ನೀಡುವರು. ಹೊಂಬುಜ ಕ್ಷೇತ್ರದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ಕಂಬದಹಳ್ಳಿ ಶ್ರೀಕ್ಷೇತ್ರದ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ, ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಶ್ರವಣಬೆಳಗೊಳ ದಿಗಂಬರ ಜೈನ ಮಹಾಸಂಸ್ಥಾನದ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ, ಮೂಡಬಿದಿರೆ ಜೈನ ಮಠದ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ನರಸಿಂಹರಾಜಪುರ ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿ ವಿಧಿ ವಿಧಾನಗಳು ನೆರವೇರಲಿದ್ದು, ಧಾರ್ಮಿಕ ಸಭೆಯಲ್ಲಿ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಂಚಕಲ್ಯಾಣ ಸಮಿತಿ ಅಧ್ಯಕ್ಷ ವಿಧ್ಯಾಧರ ಜೈನ್, ಸಮಿತಿಯ ಸದಸ್ಯರಾದ ಪ್ರಶಾಂತ್ ಜೈನ್ ಬಾರ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-126-1325365254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.