ವಿಜಯಪುರ: 12ನೇ ಶತಮಾನದ ವಚನಗಾರ್ತಿ, ಸಮಾಜದ ಮೌಢ್ಯಗಳನ್ನು ಕಿತ್ತೆಸೆದ ಮೊದಲ ಕವಯಿತ್ರಿ ಅಕ್ಕಮಹಾದೇವಿ ಹಾಗೂ ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಇಬ್ಬರೂ ಆಧ್ಯಾತ್ಮದ ಮಹಾನ್ ರತ್ನಗಳು ಎಂದು ಇಂಡಿಯ ಕರ್ನಾಟಕ ಟೀಚರ್ಸ್ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಡಾ. ಸುಧಾ ಸುಣಗಾರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಭಾನುವಾರ ವಿವಿಧ ದತ್ತಿಗೋಷ್ಠಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀಶೈಲ ಮಲ್ಲಿಕಾರ್ಜುನನ್ನು ಆರಾಧಿಸಿ ಅವನನ್ನು ಸಾಕ್ಷಾತ್ಕರಿಸಿಕೊಂಡ ಅಕ್ಕಮಹಾದೇವಿ ಎಂದರು.

ಸಾಹಿತಿ ಶಾಂತಲಾ ಪಾಟೀಲ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮಳ ಕುರಿತು ಹಾಗೂ ಶಿಕ್ಷಕಿ ಸುಖದೇವಿ ಅಲಬಾಳಮಠ ಅವರು ಶಿವಶರಣೆ ಅಕ್ಕಮಹಾದೇವಿಯ ಆಧ್ಯಾತ್ಮಿಕ ಜೀವನದ ಕುರಿತು ಉಪನ್ಯಾಸ ನೀಡಿದರು.

ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಶಿಕಲಾ ಹೂಗಾರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.ಸಾಹಿತಿ ರಾ.ಶಿ.ವಾಡೇದ ಅವರು ಬರೆದ ‘ಮಿಂಚು’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಪ್ರಾಧ್ಯಾಪಕಿ ಡಾ. ಲಕ್ಷ್ಮೀ ಮೋರೆ, ರಾಜೇಶ್ವರಿ ಮೋಪಗಾರ, ಜಗದೀಶ ಪಟ್ಟಣಶೆಟ್ಟಿ, ಶೈಲಶ್ರೀ ಪಟ್ಟಣಶೆಟ್ಟಿ, ಅನಸೂಯಾ ಬಡಿಗೇರ, ರಿಯಾಜ ಪಿಂಜಾರ, ಡಾ.ಮಾಧವ ಗುಡಿ, ಶಿಲ್ಪಾ ಭಸ್ಮೆ, ಶೋಭಾ ಬಡಿಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-361196338

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.