ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾರ ಭವಿಷ್ಯ | 2023ರ ಫೆಬ್ರುವರಿ 05 ರಿಂದ 11ರವರೆಗೆ

Last Updated 4 ಫೆಬ್ರುವರಿ 2023, 19:30 IST
ಅಕ್ಷರ ಗಾತ್ರ

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)
ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರೇಯಸ್ಸು ಇರುತ್ತದೆ ಹಾಗೂ ಮೇಧಾಶಕ್ತಿ ಹೆಚ್ಚುತ್ತದೆ. ಮಕ್ಕಳ ಆಟಿಕೆಗಳನ್ನು ತಯಾರಿಸಿ ಮಾರುವವರಿಗೆ ವ್ಯಾಪಾರ ವಿಸ್ತರಣೆ ಇದೆ. ಕ್ರೀಡಾ ವಸ್ತುಗಳನ್ನು ಮಾರಾಟ ಮಾಡುವವರಿಗೆ ಹೆಚ್ಚು ವ್ಯವಹಾರವಿರುತ್ತದೆ. ಹೊಸ ಯೋಜನೆಯನ್ನು ಜಾರಿಗೊಳಿಸುವ ಮುನ್ನ ಅವುಗಳ ಬಗ್ಗೆ ಎಲ್ಲಾ ಮಾಹಿತಿ ಕಲೆ ಹಾಕಿ ತೀರ್ಮಾನ ತೆಗೆದುಕೊಳ್ಳಿರಿ. ಜಾಣತನದಿಂದ ಮಾತನಾಡಿ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳಿರಿ. ಕೋಪಾದ್ರಿಕ್ತರಾಗಿ ಮಾತನಾಡುವುದರಿಂದ ಪ್ರಯೋಜನವಿಲ್ಲ. ಬಟ್ಟೆ ತಯಾರಕರಿಗೆ ವ್ಯವಹಾರ ವಿಸ್ತರಿಸುತ್ತದೆ. ರೇಷ್ಮೆ ವಸ್ತ್ರಗಳನ್ನು ನೇಯುವವರಿಗೆ ಬೇಡಿಕೆ ಹೆಚ್ಚುತ್ತದೆ. ಹಣದ ಒಳಹರಿವು ಮಂದಗತಿಯಲ್ಲಿರುತ್ತದೆ. ಎಲೆಕ್ಟ್ರಾನಿಕ್ಸ್ ಸಂವಹನ ಕ್ಷೇತ್ರದಲ್ಲಿರುವವರಿಗೆ ಬೇಡಿಕೆ ಹೆಚ್ಚುತ್ತದೆ. ಅಧಿಕ ಓಡಾಟ ಹೆಚ್ಚು ಆಯಾಸ ತರಬಹುದು.

ವೃಷಭ ರಾಶಿ (ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಕೈಗೊಂಡ ಕಾರ್ಯಗಳಲ್ಲಿ ಸಫಲತೆ ಕಾಣುವಿರಿ. ಹಳೆಯ ಸಾಲಗಳನ್ನು ತೀರಿಸಿ ನೆಮ್ಮದಿಯನ್ನು ಕಾಣುವಿರಿ. ರೈತರು ಕೃಷಿ ಕಾರ್ಯಗಳಲ್ಲಿ ಹೆಚ್ಚಿನ ಗಮನ ಕೊಡುವರು. ಆಹಾರ ವ್ಯತ್ಯಾಸದಿಂದ ಸ್ವಲ್ಪ ಆರೋಗ್ಯ ವ್ಯತ್ಯಾಸವಾಗಬಹುದು. ಕೆಲವೊಂದು ಸ್ವಂತ ವ್ಯವಹಾರಗಳಿಗೆ ಮಧ್ಯವರ್ತಿಗಳನ್ನು ದೂರವಿಡುವುದು ಒಳ್ಳೆಯದು. ಸಿದ್ಧಪಡಿಸಿದ ಆಹಾರವನ್ನು ತಯಾರಿಸುವವರಿಗೆ ಮಾರುಕಟ್ಟೆ ವಿಸ್ತರಣೆಯ ಯೋಗವಿದೆ. ಅತಿಯಾದ ಆಲಸ್ಯ ಮತ್ತು ಅಹಂಕಾರ ನಿಮ್ಮನ್ನು ವ್ಯವಹಾರಗಳಿಂದ ಹೊರಗಿಡುತ್ತದೆ. ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವವರ ವ್ಯಾಪಾರ ಹೆಚ್ಚಾಗಿ ಲಾಭ ಹೆಚ್ಚುತ್ತದೆ. ಸರ್ಕಾರಿ ಕೆಲಸದಲ್ಲಿರುವವರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ. ಸಂಗಾತಿಯ ಆದಾಯದಲ್ಲಿ ಹೆಚ್ಚಳ ಕಾಣಬಹುದು. ದಿನಸಿ ದಾಸ್ತಾನುದಾರರಿಗೆ ತಕ್ಷಣದ ಲಾಭ ದೊರೆಯಬಹುದು.

ಮಿಥುನ ರಾಶಿ (ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ಇತರರ ಕಷ್ಟಗಳಿಗೆ ನೆರವಾಗುವುದನ್ನು ಬೆಳೆಸಿಕೊಳ್ಳಿರಿ. ವೈದ್ಯರಿಗೆ ತಮ್ಮ ವೃತ್ತಿಯಲ್ಲಿ ಹೆಚ್ಚಿನ ಸಮಯವನ್ನು ಕಳೆಯಬೇಕಾದ ಅನಿವಾರ್ಯವಿದೆ. ಕೆಲವರಿಗೆ ಸಂಸ್ಥೆ ಮುಖಾಂತರ ತರಬೇತಿಗಾಗಿ ದೂರ ಪ್ರಯಾಣ ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಗೆ ಓಡಾಟ ಹೆಚ್ಚಾಗಿ, ಹೆಚ್ಚು ಜನಸಂಪರ್ಕ ಮಾಡಬೇಕಾದ ಅನಿವಾರ್ಯವಿರುತ್ತದೆ. ಧನ ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪುತ್ತದೆ. ಆಪ್ತ ಬಂಧುಗಳು ಯಾರೋ ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಯತ್ನಿಸುವರು ಎಚ್ಚರದಿಂದಿರಿ. ವೃತ್ತಿಯಲ್ಲಿ ಬರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದು ಹಾಗೂ ಅದರಲ್ಲಿ ಉತ್ತಮ ಫಲಿತಾಂಶ ಬರುವ ಯೋಗವಿದೆ. ಹಂಗಾಮಿ ಕೆಲಸಗಾರರಲ್ಲಿ ಕೆಲವರಿಗೆ ಕಾಯಂ ಆಗುವ ಯೋಗವಿದೆ. ವಿದೇಶದಲ್ಲಿ ವೃತ್ತಿಯಲ್ಲಿರುವವರಿಗೆ ಮುಂಬಡ್ತಿ ದೊರೆಯಬಹುದು.

ಕಟಕ ರಾಶಿ (ಪುನರ್ವಸು 4 ಪುಷ್ಯ ಆಶ್ಲೇಷ)
ಸರ್ಕಾರಿ ಕಚೇರಿಗಳಿಗೆ ಹೆಚ್ಚು ಅಲೆದಾಟವಾದರೂ ಕೆಲಸಗಳಾಗುತ್ತವೆ. ಹಣದ ಒಳಹರಿವು ನಿಮ್ಮ ನಿರೀಕ್ಷೆಯನ್ನು ಮುಟ್ಟುತ್ತದೆ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮಲ್ಲಿಗೆ ಬರುವರು. ಕಾರ್ಯದೊತ್ತಡಗಳ ನಡುವೆ ಕುಟುಂಬದಲ್ಲಿನ ಆಗು ಹೋಗುಗಳತ್ತ ಗಮನಹರಿಸುವುದು ಒಳ್ಳೆಯದು. ಹಳೆಯ ಸ್ನೇಹಿತರ ಸಂಪರ್ಕ ದೊರೆತು ಸಂತೋಷಪಡುವಿರಿ. ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡುವವರಿಗೆ ಹೆಚ್ಚು ಕೆಲಸ ದೊರೆಯುತ್ತದೆ. ಷೇರು ವ್ಯವಹಾರಗಳಲ್ಲಿ ಅಷ್ಟು ಏಳಿಗೆ ಇರುವುದಿಲ್ಲ. ಕೆಲವರಿಗೆ ಸೂಕ್ತ ವೈವಾಹಿಕ ಸಂಬಂಧ ದೊರೆಯುವ ಸಾಧ್ಯತೆ ಇದೆ. ಹಿರಿಯರಿಂದ ನಿಮ್ಮ ಪರಂಪರೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ದೊರೆಯುತ್ತದೆ. ವಾಹನ ತಯಾರಿಕಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಸೌಲಭ್ಯ ಹೆಚ್ಚುತ್ತದೆ.

ಸಿಂಹ ರಾಶಿ (ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ವೃತ್ತಿಯಲ್ಲಿ ಬರುವ ಯಾವುದೇ ಹೊಸ ಜವಾಬ್ದಾರಿಗಳನ್ನು ಸಂಕೋಚವಿಲ್ಲದೆ ಒಪ್ಪಿಕೊಳ್ಳಿರಿ, ಅದು ನಿಮ್ಮ ಏಳಿಗೆಗೆ ಕಾರಣವಾಗುತ್ತದೆ. ಪ್ರಭಾವಶಾಲಿ ವ್ಯಕ್ತಿಯೊಬ್ಬರ ಭೇಟಿಯಾಗಬಹುದು. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಆಸಕ್ತಿ ಮೂಡುತ್ತದೆ. ಆಹಾರ ವ್ಯತ್ಯಾಸದಿಂದ ಅನಾರೋಗ್ಯ ಕಾಡಬಹುದು. ಆಸ್ತಿ ತೆರಿಗೆ ಪಾವತಿಯಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಬಹಳ ಉತ್ತಮ. ತಾಯಿಯೊಡನೆ ಕಾವೇರಿದ ಮಾತುಗಳಾಗಬಹುದು. ಸಂಗಾತಿಗೆ ಹಿರಿಯರ ಆಸ್ತಿ ಒದಗುವ ಸಂದರ್ಭವಿದೆ. ಶಿಕ್ಷಣ ಸಂಸ್ಥೆಗಳನ್ನು ನಡೆಸುವವರಿಗೆ ಕೆಲವು ಸರ್ಕಾರಿ ಕಾನೂನಿನ ತೊಡಕುಗಳು ಬರುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗಬೇಕೆನ್ನುವವರಿಗೆ ದಾಖಲೆ ಪತ್ರಗಳು ಸರಾಗವಾಗಿ ಆಗುತ್ತದೆ. ಧನ ಆದಾಯವು ನಿಮ್ಮ ನಿರೀಕ್ಷೆಯ ಹತ್ತಿರ ಬರುತ್ತದೆ.

ಕನ್ಯಾ ರಾಶಿ (ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಸ್ನೇಹಿತರೊಡನೆ ವ್ಯವಹಾರ ಮಾಡುವಾಗ ಸಂಶಯ, ಅಪನಂಬಿಕೆ ಬಾರದಂತೆ ಸಾಕಷ್ಟು ಎಚ್ಚರವಹಿಸಿರಿ. ನಿಮ್ಮ ಸ್ವಂತ ವ್ಯವಹಾರದಲ್ಲಿ ನಷ್ಟವಾದರೂ ತೀವ್ರ ಸಂಕಷ್ಟ ಇರುವುದಿಲ್ಲ. ನೀವಾಡುವ ಮಾತು ನಿಮಗೆ ಗೌರವ ತರುವಂತಿರಲಿ. ನಿಮ್ಮ ಉದಾಸೀನ ಮನೋಭಾವದಿಂದ ವ್ಯಾಪಾರದಲ್ಲಿ ನಷ್ಟ ಆದರೂ ಪಾಲುದಾರರಲ್ಲಿ ವಿನಂತಿಸಿದರೆ ಸುಮ್ಮನಿರುವರು. ಲಲಿತ ಕಲಾವಿದರಿಗೆ ಹೆಚ್ಚಿನ ಸಂಭಾವನೆ ಸಿಗುತ್ತದೆ. ದಿನಗೂಲಿ ನೌಕರರಿಗೆ ಹೆಚ್ಚು ಕೆಲಸ ದೊರೆತು ಆದಾಯ ಹೆಚ್ಚುವ ಸಾಧ್ಯತೆ ಇದೆ. ಸರ್ಕಾರಿ ಕಚೇರಿಯ ಕೆಲಸ ಕಾರ್ಯಗಳು ಸರಾಗವಾಗಿ ಆಗುತ್ತದೆ. ಮೂತ್ರ ಸಂಬಂಧಿ ಕಾಯಿಲೆಗಳಿದ್ದಲ್ಲಿ ಚಿಕಿತ್ಸೆಗೆ ಹೋಗುವುದು ಒಳ್ಳೆಯದು. ಹಣದ ಒಳಹರಿವು ಮಂದಗತಿಯಲ್ಲಿರುತ್ತದೆ. ಕೃಷಿಯನ್ನು ಓದುತ್ತಿರುವವರಿಗೆ ಸೂಕ್ತ ಸೌಲಭ್ಯ ದೊರೆಯುತ್ತದೆ.

ತುಲಾ ರಾಶಿ (ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಮಹಿಳೆಯರ ಅನಾರೋಗ್ಯಕರ ಚಿಂತನೆ ಅವರಿಗೆ ಕುಂದು ತರುತ್ತದೆ. ಕೆಲವೊಂದು ಸಾಂಪ್ರದಾಯಿಕ ವೈದ್ಯರಿಗೆ ಬೇಡಿಕೆ ಹೆಚ್ಚಾಗುತ್ತದೆ. ಹೊಸ ಅಧಿಕಾರಿಗಳನ್ನು ಭೇಟಿ ಮಾಡುವ ಮೂಲಕ ಉದ್ಯೋಗದಲ್ಲಿ ವರ್ಚಸ್ಸನ್ನು ಹೆಚ್ಚು ಮಾಡಿಕೊಳ್ಳುವಿರಿ. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದರೂ ಖರ್ಚು ಅದನ್ನು ಮೀರಿರುತ್ತದೆ. ಸಂಸಾರದಲ್ಲಿ ಕಲಹ ಏರ್ಪಡಬಹುದು. ವಾಯು ಪ್ರಕೋಪ ಕಾಡಬಹುದು. ವಿದೇಶದಲ್ಲಿದ್ದು ಸಂಗಾತಿಯನ್ನು ಅರಸುತ್ತಿರುವವರಿಗೆ ಈಗ ಸಂಗಾತಿ ಸಿಗುವ ಸಾಧ್ಯತೆ ಇದೆ. ಕೃಷಿ ಸಂಬಂಧಿತ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಕಾಣಬಹುದು. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಹೊಸ ಸ್ಥಾನ ದೊರೆಯುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ (ವಿಶಾಖಾ 4 ಅನುರಾಧ ಜೇಷ್ಠ)
ಲೇವಾದೇವಿ ವ್ಯವಹಾರಗಳು ಸಾಧಾರಣ ಮಟ್ಟದಲ್ಲಿ ಇದ್ದರೆ ಮಾತ್ರ ನಡೆಯುತ್ತವೆ. ಪೊಲೀಸ್‌ ಹುದ್ದೆಯಲ್ಲಿರುವ ಕೆಲವರಿಗೆ ಮುಂಬಡ್ತಿ ದೊರೆಯುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಅವಸರ ಖಂಡಿತ ಬೇಡ. ಹಣದ ಹರಿವು ಸಾಮಾನ್ಯವಾಗಿದ್ದರೂ ಖರ್ಚು ನಿಭಾಯಿಸುವುದು ಬಹಳ ಉತ್ತಮ. ಸಹೋದ್ಯೋಗಿಗಳೊಡನೆ ಹೆಚ್ಚಿನ ವಾದ ವಿವಾದಗಳು ಖಂಡಿತಬೇಡ. ಸಾಮಾಜಿಕ ಜೀವನದಲ್ಲಿ ಮತ್ತು ಭಾವನಾತ್ಮಕ ಪ್ರಪಂಚದಲ್ಲಿ ಹೆಚ್ಚು ಪ್ರಗತಿ ಕಾಣುವಿರಿ. ಕಳೆದು ಹೋಗಿದ್ದ ಸರ್ಕಾರಿ ದಾಖಲೆಗಳು ಈಗ ಸಿಗುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚು ಶ್ರದ್ಧೆ ಇರುತ್ತದೆ. ಹಣಕಾಸಿನ ಸಂಸ್ಥೆಯ ದಾಖಲೆ ಮೇಲ್ವಿಚಾರಕರು ಹೆಚ್ಚು ಎಚ್ಚರದಿಂದ ಕೆಲಸ ಮಾಡುವುದು ಒಳ್ಳೆಯದು.

ಧನಸ್ಸು ರಾಶಿ (ಮೂಲ ಪೂರ್ವಾಷಾಢ ಉತ್ತರಾಷಾಢ 1)
ಪೆಟ್ರೋಲ್ ಮಾರಾಟಗಾರರಿಗೆ ಉತ್ತಮ ವ್ಯವಹಾರ ನಡೆಯುವ ಸಾಧ್ಯತೆ ಇದೆ. ಸರ್ಕಾರದಿಂದ ಬರಬೇಕಾದ ಹಳೆ ಬಾಕಿಗಳು ಈಗ ಬಂದು ಸೇರುತ್ತವೆ. ನಿಮ್ಮ ಕೆಲಸಗಳಿಗೆ ಹೆಚ್ಚು ಆದ್ಯತೆ ನೀಡಿರಿ. ಸಾಹಸ ಕಲಾವಿದರಿಗೆ ಯಶಸ್ಸು ಸಿಗುತ್ತದೆ. ಹಣದ ಒಳಹರಿವು ತೃಪ್ತಿಕರವಾಗಿರುತ್ತದೆ. ಸರ್ಕಾರದಿಂದ ಬರಬೇಕಾಗಿದ್ದ ಎಲ್ಲ ರೀತಿಯ ಸಹಾಯಧನ ಬರುತ್ತದೆ. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವವರಿಗೆ ಅವಕಾಶ ಒದಗುತ್ತದೆ. ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಚೇತರಿಕೆ ಕಂಡು ಸಂತಸವಾಗುತ್ತದೆ. ನಿಮ್ಮ ಕಾರ್ಯಕ್ಷಮತೆಯಿಂದ ನಿಮ್ಮ ಸಂಸ್ಥೆಗೆ ಲಾಭವಾಗುತ್ತದೆ. ವೃತ್ತಿಯಲ್ಲಿ ಬಹಳ ಜಾಣ್ಮೆಯಿಂದ ಕೆಲಸವನ್ನು ನಿಭಾಯಿಸುವಿರಿ.

ಮಕರ ರಾಶಿ (ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಲೇವಾದೇವಿ ವ್ಯವಹಾರದವರಿಗೆ ಕೆಲವು ಸಂದರ್ಭಗಳಲ್ಲಿ ನಂಬಿಕೆ ದ್ರೋಹ ಆಗಬಹುದು. ದಾಂಪತ್ಯದಲ್ಲಿ ಅನ್ಯೋನ್ಯತೆ ಮೂಡುತ್ತದೆ. ನಡವಳಿಕೆಯಿಂದ ಎಲ್ಲರ ಮನಗೆದ್ದು ನಿಮ್ಮ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವಿರಿ. ವಿದೇಶಿ ಕಚೇರಿಗಳನ್ನು ನಡೆಸುತ್ತಿರುವವರು ಆ ಜಾಗವನ್ನು ಕೊಂಡು ಸ್ವಂತ ಕಚೇರಿಗಳನ್ನು ಮಾಡಿಕೊಳ್ಳುವ ಯೋಗವಿದೆ. ಆರ್ಥಿಕ ಸ್ಥಿತಿಯು ಸ್ವಲ್ಪ ಸುಧಾರಣೆಯತ್ತ ಹೊರಳುತ್ತದೆ. ಮಾರ್ಗದರ್ಶಕರ ಸಲಹೆಯಂತೆ ನಿಮ್ಮ ಗುರಿಮುಟ್ಟುವ ಹಾದಿಯನ್ನು ಬದಲಿಸಿಕೊಂಡಲ್ಲಿ ಯಶಸ್ಸು ನಿಮ್ಮದಾಗುತ್ತದೆ. ಕೆಲವು ರಾಜಕೀಯ ವ್ಯಕ್ತಿಗಳಿಗೆ ಸಂಘ ಸಂಸ್ಥೆಗಳಲ್ಲಿ ಉತ್ತಮ ಹುದ್ದೆ ದೊರೆಯುತ್ತದೆ. ಪ್ರೀತಿ ಪ್ರೇಮದಲ್ಲಿ ಬಿದ್ದರೂ ಹಿರಿಯರು ನಿಮ್ಮ ಪ್ರೀತಿಗೆ ಒಪ್ಪಿಗೆ ನೀಡುವರು. ಸರ್ಕಾರಿ ಕಾನೂನು ತೊಡಕುಗಳು ಈಗ ನಿವಾರಣೆಯಾಗುತ್ತವೆ.

ಕುಂಭ ರಾಶಿ (ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಕೂಡಿಟ್ಟ ಠೇವಣಿಯ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಳಸುವಿರಿ. ಒಡಹುಟ್ಟಿದವರು ನಿಮಗೆ ಸಾಕಷ್ಟು ವಿರೋಧವನ್ನು ಮಾಡುವರು. ಖರ್ಚಿಗೆ ತಕ್ಕಂತೆ ಆದಾಯ ಬರುವುದರಿಂದ ಹಣಕಾಸಿನ ಸ್ಥಿತಿ ಸಮತೋಲನವಾಗಿರುತ್ತದೆ. ಪಿತ್ರಾರ್ಜಿತ ಆಸ್ತಿಗಾಗಿ ಬಂಧುಗಳ ನಡುವೆ ಭಿನ್ನಾಭಿಪ್ರಾಯ ಮೂಡಬಹುದು. ವಿದ್ಯುತ್ ಉತ್ಪಾದಕರಿಗೆ ಸರ್ಕಾರದಿಂದ ಬರಬೇಕಿದ್ದ ಹಣ ಈಗ ಬರುತ್ತದೆ. ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಷೇತ್ರದಲ್ಲಿರುವವರಿಗೆ ವ್ಯವಹಾರದಲ್ಲಿ ಹೆಚ್ಚು ಲಾಭ ದೊರೆಯುತ್ತದೆ. ಹಿರಿಯರ ಕೆಲವು ಆರೋಗ್ಯ ಸಮಸ್ಯೆಗಳು ತಾನೇ ಸರಿಯಾಗುವ ಲಕ್ಷಣವಿದೆ. ಜೀವಶಾಸ್ತ್ರದ ಶಿಕ್ಷಣ ರಂಗದಲ್ಲಿರುವ ಅಧ್ಯಾಪಕರಿಗೆ ಅವರ ಸಾಧನೆಗೆ ತಕ್ಕ ಸ್ಥಾನ ದೊರೆಯುತ್ತದೆ. ವ್ಯಾಪಾರದಲ್ಲಿ ಮಧ್ಯವರ್ತಿ ವ್ಯವಹಾರ ಮಾಡುವವರಿಗೆ ಹೆಚ್ಚು ಲಾಭ ದೊರೆಯುವ ಸಂದರ್ಭವಿದೆ.

ಮೀನ ರಾಶಿ (ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಕೆಲವು ನ್ಯಾಯಮೂರ್ತಿಗಳಿಗೆ ಉತ್ತಮ ನ್ಯಾಯದಾನ ನೀಡಿದ ಸಂತೋಷವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಮಾರುಕಟ್ಟೆ ವಿಸ್ತರಿಸಲು ಬಹಳ ಶ್ರಮಪಡುವಿರಿ. ಕೆಲವರಿಗೆ ಸಂಸ್ಥೆಯೊಂದರ ಸಲಹೆಗಾರರಾಗಿ ನೇಮಕಗೊಳ್ಳುವ ಅವಕಾಶವಿದೆ. ವೃತ್ತಿಯಲ್ಲಿ ನಿಮ್ಮ ಕೆಲಸವನ್ನು ನಿಯಮ ಬದ್ಧವಾಗಿ ಮಾಡಿ ಮುಗಿಸುವುದು ಉತ್ತಮ. ಎಲ್ಲಾ ವಿಚಾರಗಳಲ್ಲೂ ನಿಮ್ಮದೇ ಅಭಿಪ್ರಾಯ ಹೇಳುವುದಕ್ಕಿಂತ ಇತರರ ಅಭಿಪ್ರಾಯಗಳಿಗೂ ಬೆಲೆ ಕೊಡುವುದು ಉತ್ತಮ. ಸ್ತ್ರೀರೋಗ ತಜ್ಞರಿಗೆ ಬೇಡಿಕೆ ಹೆಚ್ಚಾಗಿ ಧನ ಸಂಪಾದನೆ ಹೆಚ್ಚುವುದು. ಹಿರಿಯರ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸಗಳಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಡಿಮೆಯಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT