ವಡಗೇರಾ: ‘12ನೇಯ ಶತಮಾನದಲ್ಲಿ ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿ, ಅನಿಷ್ಟ ಕಂದಾಚಾರಗಳನ್ನು ಹೋಗಲಾಡಿಸಲು ನೂತನ ಕ್ರಾಂತಿಯನ್ನೇ ಬಸವಣ್ಣನವರು ಆರಂಭಿಸಿದರು’ ಎಂದು ವೀರಶೈವ ಸಮಾಜದ ತಾಲ್ಲೂಕು ಅಧ್ಯಕ್ಷ ಬಸವರಾಜ ಸೊನ್ನದ ಹೇಳಿದರು.

ಪಟ್ಟಣದಲ್ಲಿ ವೀರಶೈವ ಸಮಾಜದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇಶ್ವರ 893ನೇಯ ಜಯಂತಿಯಲ್ಲಿ ಅವರು ಮಾತನಾಡಿದರು.

‘ಕಾಯಕ ಹಾಗೂ ವಚನ ಕ್ರಾಂತಿಗೆ ಬಸವಣ್ಣನವರು ಪ್ರಾಮುಖ್ಯತೆಯನ್ನು ಕೊಟ್ಟಿದ್ದರು ಅದಕ್ಕಾಗಿ ಅವರು ಕಾಯಕವೇ ಕೈಲಾಸ ಎಂಬ ಸಿದ್ದಾಂತದಲ್ಲಿ ನಂಬಿಕೆಯನ್ನು ಇಟ್ಟು ವರ್ಗ ರಹಿತ, ವರ್ಣ ರಹಿತ, ಜಾತಿ ರಹಿತ ಸಮಾಜವನ್ನು ಸ್ಥಾಪಿಸಲು ವಚನಗಳ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸಿದರು’ ಎಂದು ತಿಳಿಸಿದರು.

ಇದಕ್ಕೂ ಮುಂಚೆ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ವೀರಶೈವ ಸಮಾಜದ ಮುಖಂಡರು ಹಾಗೂ ಪಟ್ಟಣದ ಗಣ್ಯರು ಬಸವೇಶ್ವರರ ಮೂರ್ತಿಗೆ ಪೂಜೆ ಹಾಗೂ ಮಾಲಾರ್ಪಣೆಯನ್ನು ಮಾಡಿದ ನಂತರ ವಿವಿಧ ಪುಷ್ಪಗಳಿಂದ ಸಿಂಗರಿಸಿದ್ದ ಟ್ಯಾಕ್ಟರ್ನಲ್ಲಿ ಬಸವಣ್ಣನವರ ಮೂರ್ತಿಯನ್ನು ಇಟ್ಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆಯನ್ನು ಮಾಡಿದರು. ಬಸವೇಶ್ವರ ವೃತ್ತದಲ್ಲಿಮೆರವಣಿಗೆಯು ಸಂಪನ್ನಗೊಂಡಿತ್ತು.

ಇದೇ ಸಮಯದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಸಮಾಜದ ವತಿಯಿಂದ ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

ವೀರಶೈವ ಸಮಾಜದ ಗಣ್ಯರು ಪಟ್ಟಣದ ವಿವಿಧ ಸಮುದಾಯದ ಮುಖಂಡರುಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-30-1186317400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.