ಯಾದವಾಡ: ಗ್ರಾಮದ ಮಾಳಿಂಗೇಶ್ವರ ಸಿದ್ದಗಿರಿ ಸಿದ್ದಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳು 10ರಿಂದ 16 ವರ್ಷದ ಮಕ್ಕಳಿಗಾಗಿ ಏರ್ಪಡಿಸಿದ ಐದು ದಿನಗಳ ಸಂಸ್ಕಾರ ಶಿಬಿರ ಈಚೆಗೆ, ಶಾರದಾ ಮಾತೆಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಆರಂಭಿಸಿದರು.

ಸಂಸ್ಕಾರ ಶಿಬಿರವು ಪ್ರತಿದಿನ ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಡೆಯಿತು. ಸಂಸ್ಕ್ರತ ಸಂಭಾಷಣೆ, ಭಗವದ್ಗೀತೆ, ಸಂಸ್ಕ್ರತ ಶ್ಲೋಕಗಳು, ನೀತಿಯ ಕಥೆಗಳು, ನಿತ್ಯ ದೇವರ ಪೂಜಾ ಪಾಠವನ್ನು ಒಳಗೊಂಡಿದೆ.

ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಮೌಲ್ಯಗಳು, ಶಿಸ್ತು ಮತ್ತು ಆಧ್ಯಾತ್ಮಿಕ ಜ್ಞಾನವನ್ನು ಬೆಳೆಸುವುದರ ಜೊತೆಗೆ ಯೋಗ, ಭಜನೆ, ಕಥೆ ಹೇಳುವಿಕೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಸಿದ್ಧಾರೂಡ ಕಂಬಾರ ಗುರೂಜಿ, ರಮಾನಂದ ಭಾರತಿ ಸ್ವಾಮೀಜಿ, ಗೀತಮ್ಮ ತಾಯಿ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ.

ಯಾದವಾಡ ಹಾಗೂ ಸುತ್ತಮುತ್ತಲಿನ ಗ್ರಾಮದ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿದ್ದಾರೆ ಎಂದು ಆಯೋಜಕ ಮಾಳಿಂಗೇಶ್ವರ ಆಶ್ರಮದ ಸಿದ್ದೇಶ್ವರ ಸ್ವಾಮಿಜಿ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-21-159749781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.