ಯಲಬುರ್ಗಾ: 12ನೇ ಶತಮಾನದಲ್ಲಿ ಲಿಂಗ ತಾರತಮ್ಮದ ಬಗ್ಗೆ ವಿರೋಧಿಸಿದ ಮಹಾನ್ ಮಾನವತಾವಾದಿ ಬಸವಣ್ಣನವರು ಒಬ್ಬ ಶ್ರೇಷ್ಠ ಸಮಾಜ ಸುಧಾರಕ, ಅವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ತಾಲ್ಲೂಕಿನ ಸುಕ್ಷೇತ್ರ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಬುದ್ಧ ಬಸವ ಅಂಬೇಡ್ಕರ್ ಸಾಂಸ್ಕೃತಿಕ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸಮಾನತೆ ತರುವುದಕ್ಕಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅಜ್ಞಾನ, ಮೂಢನಂಬಿಕೆ ಹಾಗೂ ಅನಾಚಾರಗಳ ವಿರುದ್ಧ ಸಮರ ಸಾರಿದ ಬಸವಣ್ಣನವರು ತಮ್ಮ ವಿಚಾರಗಳನ್ನು ವಚನ ಸಾಹಿತ್ಯದ ಮೂಲಕ ನಾಡಿಗೆ ತಿಳಿಸಿದರು. ಅವರ ವಿಚಾರಗಳು ಅನುಕರಣೆಗೆ ಬರಬೇಕು ಆಗ ಮಾತ್ರ ಅವರಿಗೆ ನಿಜ ಗೌರವ ಪ್ರಾಪ್ತಿಯಾಗುತ್ತದೆ’ ಎಂದರು.

ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಧರ್ಮ ಜಾತಿಗಳನ್ನು ಮುನ್ನೆಲೆಗೆ ತಂದು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿರುವುದು ಸಾಮಾನ್ಯವಾಗುತ್ತಿದೆ. ಜಾತಿಗಳ ನಡುವೆ ಉಂಟಾಗುವ ಸಂಘರ್ಷಗಳು ಅತ್ಯಂತ ಹೀನ ಕೃತ್ಯವಾಗಿದೆ. ಅನೇಕ ಕಡೆಗಳಲ್ಲಿ ದಲಿತ ಸಮಾಜದವರಿಗೆ ಧಾರ್ಮಿಕ ಸ್ಥಳಗಳಲ್ಲಿ ಅವಕಾಶ ಕೊಡದೇ ಇರುವುದು ನೋವಿನ ಸಂಗತಿಯಾಗಿದೆ. ಇಂತಹ ಆಚರಣೆಯಲ್ಲಿ ತೊಡಗುವವರು ಮಾನಸಿಕ ರೋಗಿಗಳೆಂದರೆ ತಪ್ಪಾಗದು. ಜಾತಿ ಹೆಸರಲ್ಲಿ ರಾಜಕೀಯ ಮಾಡಿದರೆ, ಮತಯಾಚಿದರೆ ಯಾವತ್ತೂ ಮತಗಳಿಸಲು ಸಾಧ್ಯವಿಲ್ಲ ಎಂದು ರಾಜಕಾರಣಿಗಳು ಅರ್ಥಮಾಡಿಕೊಳ್ಳಬೇಕು ಎಂದರು.

ಅಧಿಕಾರಿಗಳಾದ ಡಿವೈಎಸ್ಪಿ ಮುತ್ತಣ್ಣ ಸರವಗೋಳ, ಸಿಪಿಐ ಮೌನೇಶ ಮಾಲಿಪಾಟೀಲ, ಸಮಾಜ ಕಲ್ಯಾಣ ಅಧಿಕಾರಿ ಶಶಿಧರ ಸಕ್ರಿ, ಬೆಟದಪ್ಪ ಮಾಳೆಕೊಪ್ಪ, ಮುಖಂಡರಾದ ರಾಘವೇಂದ್ರಾಚಾರ್ಯ ಜೋಷಿ, ಹಂಪಯ್ಯ ಹಿರೇಮಠ, ಕೆರಿಬಸಪ್ಪ ನಿಡಗುಂದಿ, ಚಂದ್ರಶೇಖರಯ್ಯ ಹಿರೇಮಠ, ವೀರನಗೌಡ ಪೊಲೀಸ್ಪಾಟೀಲ, ಸುಧೀರ ಕೊರ್ಲಳ್ಳಿ, ಸಾವಿತ್ರಿ ಗೊಲ್ಲರ, ಶಿವನಗೌಡ ದಾನರಡ್ಡಿ ಸೇರಿ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-35-133009339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.