ಯಳಂದೂರು: ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿ ಅಸ್ತಿತ್ವದಲ್ಲಿದ್ದ ಮೂಢನಂಬಿಕೆ ಮತ್ತು ಸ್ತ್ರೀ ಅಸಮಾನತೆಗಳನ್ನು ಸರಳ ಭಾಷೆಯಲ್ಲಿ ಖಂಡಿಸಿದ ದೇವರ ದಾಸಿಮಯ್ಯ ನಿಜ ಶರಣ ಎಂದು ರಾಜಸ್ವ ನಿರೀಕ್ಷಕ ಎಂ.ಎಸ್.ಯದುಗಿರಿ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿಯಲ್ಲಿ ಅವರು ಮಾತನಾಡಿದರು.

‘ ಜಾತಿ ಮತಕ್ಕೆ ಕಟ್ಟು ಬೀಳದೆ, ಸಮಾಜದ ಒಳಿತಿಗೆ ಚಿಂತಿಸಿದ ದಾರ್ಶನಿಕ ದಾಸಿಮಯ್ಯ ರಚಿಸಿದ ವಚನಗಳು ಕನ್ನಡ ಸಾರಸ್ವತ ಲೋಕದಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ ’ ಎಂದರು.

ಸರಳ ಭಾಷೆಯಲ್ಲಿ ವಚನಗಳ ಸಾರವನ್ನು ಸಾಮಾನ್ಯ ಜನರಿಗೂ ತಿಳಿಯುವಂತೆ ರಚಿಸಿ ಹಾಡಿದರು. ಕಾಯಕದಿಂದ ಜೀವನ ಸಾಗಿಸಬೇಕು ಎಂದು ತಿಳಿಸಿದರು.

ಜೇಡರ ದಾಸಿಮಯ್ಯ ತಾಲ್ಲೂಕು ಅಧ್ಯಕ್ಷ ಬಸವರಾಜು, ಶಿರಸ್ತೇದಾರ್ ಶಾಂತಿ, ರೂಪಶ್ರೀ ಎಡಿಆರ್ಎಲ್ ಉಮೇಶ್ ಹಾಗೂ ಸಂಘದ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-37-1751393238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.