ಯಲ್ಲಾಪುರ: ‘ವೈದಿಕ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ. ವೇದ, ಉಪನಿಷತ್ತು, ಜ್ಯೋತಿಷ್ಯ, ಸಂಸ್ಕೃತ ಅಧ್ಯಯನ ಮಾಡಿದವರು ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗುತ್ತಾರೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ನಾಯಕನ ಕೆರೆಯ ಶಾರದಾಂಬಾ ಸಂಸ್ಕೃತ ಪಾಠಶಾಲೆಯಲ್ಲಿ ಮಂಗಳವಾರ ನಡೆದ ವಸಂತ ವೇದ ಸಂಸ್ಕೃತ ಯೋಗ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವಿದ್ವಾನ್ ವೆಂಕಟ್ರಮಣ ಭಟ್ಟ ಹಲಸ್ಖಂಡ ಮಾತನಾಡಿ, ‘ಸನಾತನ ಸಂಸ್ಕೃತಿ ಬದುಕಿಗೆ ಸನ್ಮಾರ್ಗ ತೋರಿಸುತ್ತದೆ. ಧರ್ಮ ನಮಗೆ ಹೇಗೆ ಸಾಗಬೇಕೆನ್ನುವುದನ್ನು ತಿಳಿಸುತ್ತದೆ. ಧರ್ಮ, ಅರ್ಥ, ಕಾಮ, ಮೋಕ್ಷ ಮನುಷ್ಯನನ್ನು ಶ್ರೇಷ್ಠತೆಯೆಡೆಗೆ ಕೊಂಡೊಯ್ಯುತ್ತವೆ’ ಎಂದರು.

ಶಾರದಾಂಬಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉಮೇಶ ಭಾಗ್ವತ ಅಧ್ಯಕ್ಷತೆ ವಹಿಸಿದ್ದರು. ಶಾರದಾಂಬಾ ದೇವಸ್ಥಾನದ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ತಾಲ್ಲೂಕು ಹವ್ಯಕ ಸಂಘದ ಅಧ್ಯಕ್ಷ ಡಿ.ಶಂಕರ ಭಟ್ಟ, ಯಲ್ಲಾಪುರ ಸೀಮಾ ಅಧ್ಯಕ್ಷ ಎನ್.ಎಂ ಹೆಗಡೆ ಪಣತಗೇರಿ ಮಾತನಾಡಿದರು.

ಶಾರದಾಂಬಾ ದೇವಸ್ಥಾನದ ಕಾರ್ಯಾಧ್ಯಕ್ಷ ಜಗದೀಶ ದೀಕ್ಷಿತ, ಸಹ ಕಾರ್ಯದರ್ಶಿ ನರಸಿಂಹ ಗೇರಗದ್ದೆ, ನಿರ್ದೇಶಕರಾದ ಶಂಕರ ಭಟ್ಟ ತಾರೀಮಕ್ಕಿ, ನಾಗೇಂದ್ರ ಕವಾಳೆ ಇದ್ದರು. ಪ್ರಾಧ್ಯಾಪಕ ಶಿವರಾಮ ಭಾಗ್ವತ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ತಿಕೇಯ ಭಟ್ಟ ನಿರೂಪಿಸಿದರು. ಅಧ್ಯಾಪಕ ನರಸಿಂಹ ಭಟ್ಟ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-20-1387624194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.