ಶಿವಮೊಗ್ಗ: ‘ಆನ್ಲೈನ್ ಶಾಪಿಂಗ್ ಅನುಕೂಲಕರ, ಲಾಭದಾಯಕ ಎಂದೆನಿಸಿದರೂ ವಂಚನೆ, ಗುಣಮಟ್ಟದ ಖಾತ್ರಿಯ ಕೊರತೆ, ನಕಲಿ ಉತ್ಪನ್ನಗಳ ಮಾರಾಟ ಮತ್ತು ಡೇಟಾ ಸೋರಿಕೆಯ ಅಪಾಯಗಳಿರುವುದರಿಂದ ಗ್ರಾಹಕರು ಜಾಗರೂಕರಾಗಿರಿ’ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ. ಶಿವಣ್ಣ ಎಚ್ಚರಿಸಿದರು.

ಇಲ್ಲಿನ ಕೋಟೆ ರಸ್ತೆಯ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಗ್ರಾಹಕರೇ. ಗ್ರಾಹಕರಿಗೆ ನ್ಯಾಯಯುತ, ಯೋಗ್ಯ ಹಾಗೂ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ನೀಡುವ ಜವಾಬ್ದಾರಿ ವ್ಯಾಪಾರಸ್ಥರದ್ದು. ಯಾವುದೇ ವಸ್ತುಗಳನ್ನು ಕೊಡುವವನ ತೃಪ್ತಿಗಾಗಿ ಕೊಳ್ಳುವುದಲ್ಲ, ಅಲ್ಲಿ ಗ್ರಾಹಕರ ಸಂತೃಪ್ತಿಯೇ ಮುಖ್ಯ. ಹೀಗಾಗಿ ಸುರಕ್ಷತೆ, ಆಯ್ಕೆ ಹಾಗೂ ಆರೋಗ್ಯಪೂರ್ಣ ಪರಿಸರ ಹೊಂದುವ ಹಕ್ಕು ಎಲ್ಲಾ ಗ್ರಾಹಕರಿಗೂ ಇದೆ’ ಎಂದು ತಿಳಿಸಿದರು.

ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಎಸ್. ಪ್ರಶಾಂತ್ ಅಧ್ಯಕ್ಷತೆ ವಹಿಸಿದ್ದರು. ಆಯೋಗದ ಸದಸ್ಯ ಬಿ.ಡಿ. ಯೋಗಾನಂದ, ವಾಸವಿ ವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ. ಶೇಷಾಚಲ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಚಾಲಕ ಎಂ.ಎಂ. ಜಯಸ್ವಾಮಿ, ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕಿ ಸಿ.ಎಂ. ಧನಲಕ್ಷ್ಮಿ, ಆಹಾರ ಇಲಾಖೆ ಉಪ ನಿರ್ದೇಶಕ ಡಿ. ಸತೀಶ್, ಸಹಾಯಕ ನಿರ್ದೇಶಕಿ ಲಕ್ಷ್ಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-42-521013410

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.