ಶಿವಮೊಗ್ಗ: ‘ಜಾಗತಿಕವಾಗಿ ಪ್ರಸ್ತುತ ಎದುರಿಸುತ್ತಿರುವ ಎಲ್ಲ ವಿಪ್ಲವಗಳಿಗೆ ವಚನ ಸಾಹಿತ್ಯದಲ್ಲಿ ಪರಿಹಾರವಿದೆ’ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಸಿ. ಸೋಮಶೇಖರ್ ಹೇಳಿದರು.

ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಆರಂಭವಾದ ಜಿಲ್ಲಾ ಮಟ್ಟದ ಏಳನೇ ಶರಣ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

‘ಯುವ ಸಮೂಹಕ್ಕೆ ವಚನಗಳು ಹಾಗೂ ಅವುಗಳ ಸಾರವನ್ನು ತಿಳಿಸಿಕೊಡುವ ಅಗತ್ಯವಿದ್ದು, ಆ ಹಾದಿಯಲ್ಲಿ ಪೋಷಕರೊಂದಿಗೆ ಸೇರಿ ವಚನ ಸಾಹಿತ್ಯ ಪರಿಷತ್ ಕಾರ್ಯಕ್ರಮಗಳ ಹಮ್ಮಿಕೊಳ್ಳಲಿದೆ’ ಎಂದರು.

‘ವಚನ ಸಾಹಿತ್ಯ ಮನುಕುಲಕ್ಕೆ ಶಕ್ತಿ ತುಂಬಿದೆ. ಅಲ್ಲಮನ ಭಕ್ತಿ, ಅಕ್ಕನ ಭಕ್ತಿ ಎರಡೂ ಕೂಡ ಈ ಜಿಲ್ಲೆಯ ಮಣ್ಣಿನಲ್ಲಿ ಇದೆ’ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

‘ಮೊಬೈಲ್ ಫೋನ್ಗಳ ಹೆಚ್ಚಿನ ಬಳಕೆಯಿಂದ ಯುವ ಸಮೂಹ ಖಿನ್ನತೆಗೆ ಒಳಗಾಗುತ್ತಿದೆ. ಅವರಿಗೆ ಚಿಕಿತ್ಸೆ ನೀಡಲು ಮನೋವೈದ್ಯರು, ಮನಃಶಾಸ್ತ್ರಜ್ಞರ ಕೊರತೆ ಆಗಲಿದೆ ಎಂದು ಅಧ್ಯಯನವೊಂದು ಹೇಳುತ್ತದೆ. ಆದರೆ, ಆ ಮಕ್ಕಳಿಗೆ ಶರಣರ ವಚನಗಳು ಮತ್ತು ಅವುಗಳ ಸಾರವನ್ನು ತಿಳಿಸಿದರೆ ಈ ಕೊರತೆ ನೀಗಲಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ‘ನಾನು, ನನ್ನದು ಮತ್ತು ದ್ವೇಷ, ಪ್ರತಿಷ್ಠೆ ಇವುಗಳನ್ನು ತೊಡೆದು ಹಾಕಿದಾಗ ಯುದ್ಧ ಎನ್ನುವಂತಹ ಸಂದರ್ಭವೇ ಬರುವುದಿಲ್ಲ. ಆದರೆ, ಪ್ರತಿಷ್ಠೆಯೇ ಮುಖ್ಯ ಆಗಿರುವುದರಿಂದ ಪ್ರಸ್ತುತ ಜಾಗತಿಕವಾಗಿ ಯುದ್ಧದ ಕಾರ್ಮೋಡ ಆವರಿಸಿದೆ’ ಎಂದರು.

‘ಲಿಂಗಾಯತರು ವಚನ ಸಾಹಿತ್ಯದ ಸೀಮೋಲ್ಲಂಘನೆಗೆ ಬಿಟ್ಟಿದ್ದರೆ ಪ್ರಸ್ತುತ ಜಾಗತಿಕವಾಗಿ ಪ್ರಜಾಪ್ರಭುತ್ವದ ತಾಯಿ ಬ್ರಿಟನ್ನ ಮ್ಯಾಗ್ನಕಾರ್ಟ ಬದಲಿಗೆ ಅನುಭವ ಮಂಟಪ ಆಗಿರುತ್ತಿತ್ತು. ಈ ಬಗ್ಗೆ ಮೊದಲೇ ಗೊತ್ತಿದ್ದರೆ ವಚನಗಳ ಆಶಯವನ್ನು ಸಂವಿಧಾನದ ಪೀಠಿಕೆಯಲ್ಲಿ ಅಳವಡಿಸುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರಿಗೆ ಸ್ವತಃ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು’ ಎಂದು ಶ್ರೀಗಳು ಸ್ಮರಿಸಿದರು.

ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಅಂಬ್ರಯ್ಯ ಮಠ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಹಾರುದ್ರ, ಮಾಜಿ ಶಾಸಕ ಎಸ್. ರುದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ ಹಾಜರಿದ್ದರು.

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ, ಮಾಜಿ ಸಂಸದ ಆಯನೂರು ಮಂಜುನಾಥ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-42-1656451412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.