ವಿಜಯಪುರ(ದೇವನಹಳ್ಳಿ): ಪ್ರತಿಯೊಬ್ಬರು ಉತ್ತಮ ಶಿಕ್ಷಣ, ಸಂಸ್ಕಾರ ಪಡೆದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಪೋಷಕರು ತಮ್ಮ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕು ಎಂದು ತುಮಕೂರು ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿಮಾತನಾಡಿದರು. ಡಾ.ಶಿವಕುಮಾರ ಸ್ವಾಮೀಜಿ ಅವರ ಬದುಕು ತ್ಯಾಗದಿಂದ ಕೂಡಿತ್ತು. ಅವರ ಪೂಜೆ, ಸೇವೆ ಪ್ರತಿಫಲದಿಂದ ಲಕ್ಷಾಂತರ ಮಕ್ಕಳು ಉನ್ನತ ಸ್ಥಾನ ಪಡೆದಿದ್ದಾರೆ ಎಂದರು.

ಶ್ರೀಗಳು ಮಠದಲ್ಲಿ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ದಾಸೋಹ ನೀಡಿದ್ದಲ್ಲದೆ ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ತೆರೆದು ಅವರನ್ನು ಅಕ್ಷರಸ್ಥರನ್ನಾಗಿಸುವ ಜತೆಗೆ ಸಂಸ್ಕಾರ ಕಲಿಸಿ ಉತ್ತಮ ಬದುಕು ರೂಪಿಸಿಕೊಳ್ಳಲು ಅವಕಾಶ ಕಲ್ಪಿಸಿದರು. ಶ್ರೀಗಳ ಆಶಯದಂತೆ ನಾವೆಲ್ಲಾ ಬದುಕೋಣ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಸ್.ರುದ್ರೇಶ್ ತಿಳಿಸಿದರು.

ಸಿದ್ದಗಂಗೆ ಹೊನ್ನಮ್ಮ ಗವಿಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್, ಮಾಜಿ ಸದಸ್ಯ ಭಾಸ್ಕರ್, ಮಾಜಿ ಅಧ್ಯಕ್ಷೆ ರಾಜೇಶ್ವರಿ ಭಾಸ್ಕರ್, ಶಿಕ್ಷಕಿ ಎಂ ಗಿರಿಜಾಂಬ, ಎಚ್.ಎಸ್ ಕನ್ಯಾಕುಮಾರಿ, ಶಿಕ್ಷಕ ಸುರೇಶ್, ಜಗದೀಶ್, ವೀರಭದ್ರಸ್ವಾಮಿ ಗೋಷ್ಠಿ ಅಕ್ಕನ ಬಳಗದ ಸೇವಾ ಟ್ರಸ್ಟ್ ಅಧ್ಯಕ್ಷ ವಿ.ಅನಿಲ್ ಕುಮಾರ್, ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಮಾ.ಸುರೇಶ ಬಾಬು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಹಡಪದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-15-432575926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.